ಸರ್ಕಾರವೇ ಇಲ್ಲವಾಗುವಾಗ ಪ್ರತಿಪಕ್ಷ ನಾಯಕ ಏಕೆ ಬೇಕು: ಯತ್ನಾಳ ಪ್ರಶ್ನೆ

Date:

Advertisements
  • ‘ವಿರೋಧ ಪಕ್ಷದ ನಾಯಕ ಆಯ್ಕೆ ಮಾಡುವುದರೊಳಗಾಗಿ  ಸರ್ಕಾರ ಪತನ’
  • ‘ರಾಜಕೀಯ ಭೂಕಂಪ ಮೊದಲು ಬೆಳಗಾವಿ ಜಿಲ್ಲೆಯವರಿಗೆ ಗೊತ್ತಾಗುತ್ತದೆ’

ರಾಜ್ಯ ಸರ್ಕಾರವೇ ಪತನಗೊಳ್ಳುತ್ತಿರುವಾಗ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಏಕೆ ಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.

ವಿಜಯಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವುದರೊಳಗಾಗಿ ಕಾಂಗ್ರೆಸ್ ಸರ್ಕಾರವೇ ಇಲ್ಲದಂತಾಗಬಹುದು” ಎಂದರು.

“ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ದೊಡ್ಡ ಷಡ್ಯಂತ್ರ ನಡೆದಿದೆ. ಅವರದ್ದೇ ಪಕ್ಷದ ಚನ್ನಗಿರಿ ಶಾಸಕ ಡಿ.ಕೆ. ಶಿವಕುಮಾರ್‌ಗೆ 70 ಶಾಸಕರ ಬೆಂಬಲ ಇದೆ ಎಂದಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಅವರ ಕಡೆಗೆ 65 ಅಷ್ಟೇ ಇದೆ ಎಂದಾಯಿತು” ಎಂದರು.

Advertisements

“ಶಾಸಕ ರಮೇಶ ಜಾರಕಿಹೊಳಿ ಹೇಳಿದ ಹಾಗೆ ಸರ್ಕಾರ ಪತನವಾಗುವ ಸಾಧ್ಯತೆ ಇದೆ. ಎಲ್ಲೇ ರಾಜಕೀಯ ಭೂಕಂಪನವಾದರೂ ಮೊದಲು ಬೆಳಗಾವಿ ಜಿಲ್ಲೆಯವರಿಗೆ ಗೊತ್ತಾಗುತ್ತದೆ. ಹಾಗೆಯೇ, ರಮೇಶ ಜಾರಕಿಹೊಳಿಯವರಿಗೆ ಗೊತ್ತಾಗಿದೆ ಎನ್ನಿಸುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʻಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲʼ ಎಂದು ಸಿಎಂ ಯಾರನ್ನು ಹೆದರಿಸುತ್ತಿದ್ದಾರೆ?

“ರಾಜ್ಯ ಸರ್ಕಾರ ಪೂರ್ಣವಾಗಿ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದಿಲ್ಲ. ಘೋಷಣೆಯಂತೆ 200 ಯುನಿಟ್ ವಿದ್ಯುತ್ ಉಚಿತ ಕೊಡುತ್ತಿಲ್ಲ. ಗೃಹ ಲಕ್ಷ್ಮಿ ಎಲ್ಲರಿಗೂ ಸಿಕ್ಕಿಲ್ಲ, ಅದಕ್ಕಾಗಿ ಹಣ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಹುಲಿ ಉಗುರು, ಚಿರತೆ ಉಗುರು, ಬಸವನಾಡು ನಾಮಕರಣ ಮಾಡುವುದು ಸೇರಿದಂತೆ ಕೆಲಸಕ್ಕೆ ಬಾರದ ವಿಷಯಗಳ ಮೂಲಕ ಜನರನ್ನು ತಪ್ಪು ದಾರಿಗೆ ಒಯ್ಯುತ್ತಿದ್ದಾರೆ” ಎಂದು ಕಿಡಿ ಕಾರಿದರು.

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳಿಗೆ ಬೆಂಕಿ ಹಚ್ಚುತ್ತಿರುವ ವಿಷಯವಾಗಿ ಪ್ರತಿಕ್ರಿಯಿಸಿದ ಯತ್ನಾಳ, “ಕನ್ನಡಿಗರನ್ನು ಉದ್ದೇಶಪೂರ್ವಕವಾಗಿ ಕೆರಳಿಸುವ ಪ್ರಯತ್ನ ಮಾಡಬಾರದು. ಪ್ರಚೋದನೆ ಕೊಡುವ ಕೆಲಸ ಖಂಡಿಸುತ್ತೇವೆ. ನಿಮ್ಮ ಸರ್ಕಾರದ ಜಗಳದಿಂದಾಗಿ ಕರ್ನಾಟಕದ ಬಸ್‌ಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇವರ ಪಕ್ಷದಲ್ಲಿ ಜನರಿಗೆ ಮನರಂಜನೆ ನೀಡುವ ಸಾಕಷ್ಟು ಆಸಾಮಿಗಳು ಇದ್ದಾವೆ,,, ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲು ಆಂತರಿಕ ಕಚ್ಚಾಟ ಇಡೀ ರಾಜ್ಯ ಅಷ್ಟೇ ಅಲ್ಲ ದೇಶಕ್ಕೆ ಗೊತ್ತು,,, ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಕೆಡುವುದು ಇವರಿಗೆ ಮಕ್ಕಳಾಟ,, ರಾಜಕಾರಣವನ್ನು ರಾಡಿ ಎಬ್ಬಿಸಿದರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X