ಈಶ್ವರಪ್ಪ, ಕೋಟ, ಪಿಸಿ ಮೋಹನ್‌ಗೆ ಹೈಕಮಾಂಡ್ ಬುಲಾವ್; ದೆಹಲಿಗೆ ದೌಡು

Date:

Advertisements

ದೆಹಲಿಗೆ ಬರುವಂತೆ ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ಬಂದಿದ್ದು, ಈಶ್ವರಪ್ಪ ಇಂದು (ಗುರುವಾರ) ದೆಹಲಿಗೆ ಹೊರಟಿದ್ದಾರೆ. ಅವರೊಂದಿಗೆ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ಪಿ.ಸಿ.ಮೋಹನ್ ಅವರಿಗೂ ಹೈಕಮಾಂಡ್ ಬುಲಾವ್ ಬಂದಿದೆ. ಹೀಗಾಗಿ, ಈಶ್ವರಪ್ಪ ಜೊತೆಗೆ ಈ ಇಬ್ಬರೂ ಕೂಡ ದೆಹಲಿಗೆ ತೆರಳುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಈಶ್ವರಪ್ಪ, “ಹೈಕಮಾಂಡ್ ಕರೆ ಬಂದಿದೆ. ಹೀಗಾಗಿ, ದೆಹಲಿಗೆ ಹೋಗುತ್ತಿದ್ದೇನೆ. ಯಾವ ಕಾರಣಕ್ಕೆ ದೆಹಲಿಗೆ ಬರಲು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ರಾಜ್ಯಾಧ್ಯಕ್ಷ ಆಯ್ಕೆಗೆ ಹೈಕಮಾಂಡ್‌ಗೆ ಸಲಹೆ ನೀಡುವಷ್ಟು ನಾನು ದೊಡ್ಡವನಲ್ಲ. ಯಾಕೆ ಕರೆಸಿಕೊಳ್ಳುತ್ತಿದ್ದಾರೆ ಎಂಬುದು ಅಲ್ಲಿಗೆ ಹೋದ ಬಳಿಕವೇ ತಿಳಿಯಲಿದೆ” ಎಂದು ಹೇಳಿದ್ದಾರೆ.

“ಆಪರೇಷನ್ ಕಮಲ ನಡೆಸುತ್ತಿದ್ದೇವೆಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಅವರು ಪ್ರತಿದಿನ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಅವರ ಶಾಸಕರಿಗೆ 50 ಕೋಟಿ ರೂ. ಕೊಡೋಕೆ ನಮಗೆ ಗ್ರಹಚಾರವೇ?” ಎಂದಿದ್ದಾರೆ.

Advertisements

“ಬಿಜೆಪಿಯಲ್ಲಿದ್ದ 50%ಗೂ ಹೆಚ್ಚು ಮಂದಿ ಕಾಂಗ್ರೆಸ್‌ ಸೇರಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಹೋಗಿರುವವರು ಚಿಲ್ಲರೆಪಲ್ಲರೆ ಕಾರ್ಯಕರ್ತರು. ಹೋದವರಲ್ಲಿ ಒಬ್ಬ ನಾಯಕನನ್ನು ತೋರಿಸಲಿ. ಹೋಗಿರೋರಲ್ಲಿ ಮತ್ತೆ ನಮ್ಮ ಪಕ್ಷಕ್ಕೆ ಯಾರ್‍ಯಾರು ಬರ್ತಾರೆ ಎಂಬುದನ್ನು ಮುಂದೆ ನೋಡಿ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X