ಬೆಂಗಳೂರು | ಉದ್ದೇಶಪೂರ್ವಕವಾಗಿ ವ್ಯಕ್ತಿಯ ಮೇಲೆ ಸ್ಕಾರ್ಪಿಯೊ ಹತ್ತಿಸಿ ಹತ್ಯೆ: ಏನಿದು ಘಟನೆ?

Date:

Advertisements

ವಾಹನ ಸವಾರರೊಬ್ಬರಿಗೆ ಕಾರಿನಿಂದ ಡಿಕ್ಕಿ ಹೊಡೆದು ಬೀಳಿಸಿ, ಉದ್ದೇಶಪೂರ್ವಕವಾಗಿ ಅವರ ಮೇಲೆ ವಾಹನ ಚಲಾಯಿಸಿ ಕೊಲೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ನಡೆದಿದೆ.

ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ಹತ್ಯೆಯ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಕಾರ್ಪಿಯೋ ವಾಹನ ಚಾಲಕ ದ್ವಿಚಕ್ರ ವಾಹನ ಸವಾರನನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ದೃಶ್ಯಾವಳಿಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

Advertisements

ಕೊಲೆಯಾದ ವ್ಯಕ್ತಿಯನ್ನು ಅಸ್ಗರ್ ಎಂದು ಗುರುತಿಸಲಾಗಿದೆ. ಈ ಪ್ರಕರಣದ ಪ್ರಾಥಮಿಕ ಶಂಕಿತನನ್ನು ಅಮರೀನ್ ಎಂದು ಗುರುತಿಸಲಾಗಿದೆ.

ಕೊಲೆಯಾದ ವ್ಯಕ್ತಿ ಅಸ್ಗರ್ ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದನು. ಅಸ್ಗರ್ ಅವರಿಂದ ಆರೋಪಿ ಅಮರೀನ್ ವಾಹನ ಪಡೆದಿದ್ದನು. ಅಸ್ಗರ್ ಮತ್ತು ಅಮರೀನ್ ನಡುವೆ ₹4 ಲಕ್ಷ ಹಣಕಾಸಿನ ವಿವಾದವಿತ್ತು. ಈ ಹಣಕಾಸಿನ ವಿವಾದ ಇದೀಗ ಹಿಂಸಾತ್ಮಕ ರೂಪಕ್ಕೆ ತಿರುಗಿ ಅಮರೀನ್, ಅಸ್ಗರ್ ಅವರ ಜೀವವನ್ನು ಬಲಿ ತೆಗೆದುಕೊಂಡಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರೀನ್ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪ್ರಾಧಿಕಾರ ರಚನೆಯಾಗಬೇಕು: ನಿರಂಜನಾರಾಧ್ಯ.ವಿ.ಪಿ

ಘಟನೆ ದಿನ

ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಆರೋಪಿ ಅಮರೀನ್ ಎಸ್‌ಯುವಿ ವಾಹನದ ಮೂಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಅಸ್ಗರ್ ಅವರನ್ನು ಹಿಂಬಾಲಿಸುತ್ತಾ ಬಂದಿದ್ದಾನೆ. ಈ ವೇಳೆ, ಡಿಕ್ಕಿ ಹೊಡೆದು ಉರುಳಿಸಿದ್ದಾನೆ. ಕೆಳಗೆ ಬಿದ್ದ ಅಸ್ಗರ್ ಅವರು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ರಸ್ತೆಯ ಉದ್ದಗಲಕ್ಕೂ ಓಡಾಡಿದ್ದಾರೆ. ಆದರೂ ಬಿಡದ ಆರೋಪಿ ಅಮರೀನ್ ತನ್ನ ಎಸ್‌ಯುವಿ ಕಾರನ್ನು ಉದ್ದೇಶಪೂರ್ವಕವಾಗಿ ಅಸ್ಗರ್ ಮೇಲೆ ಹರಿಸಿದ್ದಾನೆ. ನಡು ರಸ್ತೆಯಲ್ಲಿ ರಾತ್ರಿಯ ಕಗತ್ತಲಲ್ಲಿ ದಾರುಣವಾಗಿ ಹತ್ಯೆ ಮಾಡಿದ್ದಾನೆ.

ಈ ಘಟನೆ ಸಂದರ್ಭದಲ್ಲಿ ಅಸ್ಗರ್ ಅವರ ಸಹಾಯಕ್ಕೆ ಯಾರು ತೆರಳಿಲ್ಲ ಎಂಬುದು ಸಾರ್ವಜನಿಕರು ಮಾಡಿದ ವಿಡಿಯೋ ಮೂಲಕ ತಿಳಿದು ಬರುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X