ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು. ವಿದ್ಯಾರ್ಥಿಗಳು ಏಕೀಕರಣದ ಇತಿಹಾಸವನ್ನು ಅರಿತಾಗ ಭಾಷಾಭಿಮಾನ ಇನ್ನಷ್ಟು ಹೆಚ್ಚುತ್ತದೆ ಎಂದು ಬೂದಿಹಾಳ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಸಾಹಿತ್ಯ, ಸಂಗೀತ, ಕಲೆ ಮತ್ತು ಸಂಸ್ಕೃತಿಯಲ್ಲಿ ಕನ್ನಡ ಹಾಸುಹೊಕ್ಕಾಗಿದ್ದು ಅದರ ಸಂವರ್ಧನೆಗಾಗಿ ಎಲ್ಲರೂ ಸದಾ ಒಂದಾಗಿರಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕನ್ನಡ ಅಂಕಿಗಳನ್ನು ಬಳಕೆ ಮಾಡಬೇಕು” ಎಂದು ಅವರು ಕರೆ ನೀಡಿದರು.
ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಭುವನೇಶ್ವರಿ, ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವನ ವೇಷ ಧರಿಸಿ ಭಾಗಿಯಾದರು.
ಕನ್ನಡ ನಾಡು ನುಡಿಯ ಬಗ್ಗೆ ಕವನ ವಾಚನ, ಭಾಷಣ, ಗೀತಗಾಯನ, ರಂಗೋಲಿ, ನೃತ್ಯ ಏರ್ಪಡಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ. ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಸದಸ್ಯರಾದ ಮಹಾಂತೇಶ ಸೊಗಲದ, ರಮೇಶ ಸೂರ್ಯವಂಶಿ, ಗ್ರಾಮ ಪಂಚಾಯತಿ ಸದಸ್ಯ ಮಹಾಂತೇಶ ಹುಣಶೀಕಟ್ಟಿ, ರಾಜಶೇಖರ ದೊಡವಾಡ, ಶಿಕ್ಷಕರಾದ ಜೆ.ಆರ್.ನರಿ, ಪಿ.ಎಸ್ ಗುರುನಗೌಡರ, ಎಸ್.ವಿ.ಬಳಿಗಾರ, ಆರ್.ಸಿ.ಸೊರಟೂರ, ಎಚ್.ವಿ.ಪುರಾಣಿಕ, ವಿ.ಬಿ.ಪಾಟೀಲ, ಎಸ್.ಬಿ.ಹತ್ತರಕಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಕ್ಷ್ಮೀ ನಾಗಣ್ಣವರ ಸ್ವಾಗತಿಸಿದರು. ಪೃಥ್ವಿ ಗರಗದ ನಿರೂಪಿಸಿದರು. ಸುನಿತಾ ಚಿಲಮೂರ ವಂದಿಸಿದರು. ಸುಶ್ಮಿತಾ ಸೊಗಲದ ನಿರ್ವಹಿಸಿದರು.