ಬರೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ಮಂಗಳವಾರ ಸಂಜೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿತ್ತು. ಆ ಮೂವರು ಸಾವನ್ನಪ್ಪಿ ಎರಡು ದಿನಗಳು ಕಳೆದರೂ ಮರಣೋತ್ತರ ಪರೀಕ್ಷೆ ನಡೆದಿಲ್ಲ ಎಂದು ತಿಳಿದುಬಂದಿದೆ.
ಮೃತಪಟ್ಟ ಮೂವರು ಕಾರ್ಮಿಕರ ಮರಣೋತ್ತರ ಪರೀಕ್ಷೆ ಇನ್ನೂ ನಡೆದಿಲ್ಲ. ಮೃತಪಟ್ಟವರ ವಾರಸುದಾರರ ಮಾಹಿತಿ ಸಮರ್ಪಕವಾಗಿಲ್ಲ. ಹೀಗಾಗಿ, ಮರಣೋತ್ತರ ಪರೀಕ್ಷೆ ವಿಳಂಬವಾಗಿದೆ ಎಂದು ಹೇಳಲಾಗಿದೆ.
ಕಾರ್ಮಿಕರ ಸಾವಿನ ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುತ್ತಿಗೆದಾರ ಮನು ಮತ್ತು ಜಾಗದ ಮಾಲೀಕ ಪ್ರದೀಪ್ ವಿರುದ್ಧ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.