ಕಳಮಶ್ಶೇರಿ ಸ್ಫೋಟ ಪ್ರಕರಣ | ‘ನಾನೇ ವಾದಿಸುತ್ತೇನೆ, ವಕೀಲರು ಬೇಡ’ ಎಂದ ಆರೋಪಿ ಡೊಮಿನಿಕ್ ಮಾರ್ಟಿನ್

Date:

Advertisements

ಕಳೆದ ಭಾನುವಾರ(ಅ29) ಮೂವರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕೇರಳದ ಕಳಮಶ್ಶೇರಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡೊಮಿನಿಕ್ ಮಾರ್ಟಿನ್, ನ್ಯಾಯಾಲಯದಲ್ಲಿ ತನ್ನ ಪರವಾಗಿ ವಾದಿಸಲು ವಕೀಲರು ಬೇಡ, ನಾನೇ ವಾದಿಸುತ್ತೇನೆ ಎಂದು ತಿಳಿಸುವ ಮೂಲಕ ಕಾನೂನು ನೆರವನ್ನು ತಿರಸ್ಕರಿಸಿದ್ದಾನೆ.

ಕಾನೂನು ನೆರವು ನಿರಾಕರಿಸಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿ ಡೊಮಿನಿಕ್ ಅನ್ನು ನಿನ್ನೆ ಸಂಜೆ(ನ.1) ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹನಿ ಎಂ ವರ್ಗೀಸ್ ಅವರು ಹಲವಾರು ಬಾರಿ ಮನವಿ ಮಾಡಿದ ಹೊರತಾಗಿಯೂ, ಕಾನೂನು ನೆರವು ವಕೀಲರ ನೆರವನ್ನು ನಿರಾಕರಿಸಿದ್ದಾನೆ. ಅಲ್ಲದೇ, ನನ್ನನ್ನು ಸ್ವತಃ ನಾನೇ ಪ್ರತಿನಿಧಿಸುವುದಾಗಿ ಹೇಳಿಕೆ ನೀಡಿದ್ದಾನೆ. ಆರೋಪಿಯು ಕಾನೂನು ನೆರವಿಗೆ ಒಪ್ಪದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನವೆಂಬರ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು.

Advertisements

dominic martin

ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಸಾಕ್ಷ್ಯ ಸಂಗ್ರಹಕ್ಕಾಗಿ ಆತನ ಮನೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು 17 ವರ್ಷಗಳ ಕಾಲ ವಿದೇಶದಲ್ಲಿ ಕೆಲಸ ಮಾಡುತ್ತಿದ್ದು ಹೆಚ್ಚಿನ ಸಂಬಳದ ಉದ್ಯೋಗವನ್ನು ಹೊಂದಿದ್ದ. ಆತ ತುಂಬಾ ಬುದ್ಧಿವಂತ. ಎಲ್ಲವನ್ನೂ ವ್ಯವಸ್ಥಿತವಾಗಿ ನಡೆಸಿದ್ದಾನೆ. ಬಾಂಬ್ ಸ್ಫೋಟದ ಬಳಿಕ ತನ್ನ ಮೊಬೈಲ್‌ನಿಂದ ಯಾರಿಗೆಲ್ಲ ಕರೆ ಮಾಡಿದ್ದಾನೆ ಎಂಬುದನ್ನು ಕೂಡ ತನಿಖೆಯಲ್ಲಿ ಪತ್ತೆ ಹಚ್ಚುತ್ತಿದ್ದೇವೆ ಮತ್ತು ಘಟನೆಯ ವಿಡಿಯೋವನ್ನು ಯಾರಿಗೆಲ್ಲ ಕಳುಹಿಸಿದ್ದ ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ಕಾಕನಾಡು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುವುದು ಎಂದು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X