2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್ ಬದಲಿಗೆ ಹತ್ತು ತಿಂಗಳಿಗೆ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ ಧನಂಜಯ ಅವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ಹೊರಡಿಸಿ, “2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಪ್ರಸಕ್ತ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್ ಬದಲಾಗಿ, ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ ಮಾತ್ರ) ನೇಮಕ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಲಾಗಿದೆ” ಎಂದು ತಿಳಿಸಿದ್ದಾರೆ.