ಬೀದರ್ | ಅಕ್ಕಮಹಾದೇವಿಯ ಸಂಘರ್ಷದ ಬದುಕು ಸಮಾಜಕ್ಕೆ ಮಾದರಿ: ಶಾಸಕ ಈಶ್ವರ ಖಂಡ್ರೆ

Date:

Advertisements

12ನೆಯ ಶತನಮಾನದಲ್ಲಿ ಅಕ್ಕಮಹಾದೇವಿ ಅವರು ಸಮಸಮಾಜ ನಿರ್ಮಾಣ ಮತ್ತು ಮಹಿಳೆಯರ ಸ್ವತಂತ್ರಕ್ಕಾಗಿ ನಡೆಸಿದ ಸಂಘರ್ಷ, ತ್ಯಾಗಮಯ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಅಕ್ಕಮಹಾದೇವಿ ಜಯಂತಿ ನಿಮಿತ್ತ ಅಕ್ಕಮಹಾದೇವಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಅವರು ಮಾತನಾಡಿದರು.

“ವಚನಗಾರ್ತಿ ಅಕ್ಕಮಹಾದೇವಿ ಅವರ ಒಂದೊದು ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಗಿವೆ. ಜೀವನದಲ್ಲಿ ಎಷ್ಟೇ ಕಷ್ಟ, ಸಮಸ್ಯೆಗಳು ಬಂದರೂ ಎದೆಗುಂದದೇ ಧೈರ್ಯದಿಂದ ಎದುರಿಸಿ ಮಹಿಳಾ ಕುಲದ ಸ್ವಾಭಿಮಾನವನ್ನು ಎತ್ತಿ ಹಿಡಿದಿದ್ದರು. ಅಕ್ಕಮಹಾದೇವಿ ಅವರು ತೋರಿದ ದಿಟ್ಟತನ, ಧೈರ್ಯವನ್ನು ಪ್ರಸ್ತುತ ಕಾಲದ ಎಲ್ಲ ಮಹಿಳೆಯರು ತಮ್ಮ ನಿಜ ಜೀವನದಲ್ಲಿ ಆಚರಣೆಗೆ ತಂದರೇ ಹೆಣ್ಣು ಭ್ರೂಣ ಹತ್ಯೆ, ದೌರ್ಜನ್ಯದಂತಹ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements

“ಭಾಲ್ಕಿಯಲ್ಲಿ ಅಕ್ಕಮಹಾದೇವಿ ಪುತ್ಥಳಿ ನಿರ್ಮಾಣ ಆಗಬೇಕೆನ್ನುವುದು ಮಹಿಳೆಯರ ಬಹುದಿನಗಳ ಬೇಡಿಕೆ ಆಗಿತ್ತು. ಅದರಂತೆ ಚನ್ನಬಸವಾಶ್ರಮದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರ, ಗುರುಬಸವ ಪಟ್ಟದ್ದೇವರ ಮಾರ್ಗದರ್ಶನದ ಮೇರೆಗೆ ಅಕ್ಕಮಹಾದೇವಿ ಪುತ್ಥಳಿಗೆ ದೇಣಿಗೆ ಮತ್ತು ಅನಾವರಣಕ್ಕೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯವೆಂದು ಭಾವಿಸಿದ್ದೇನೆ” ಎಂದು ತಿಳಿಸಿದರು.

“ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸಿ ಮಾತನಾಡಿ, “12ನೇ ಶತನಮಾನದಲ್ಲಿ ಅಕ್ಕಮಹಾದೇವಿ ಅವರಿಗೆ ಅರಸೊತ್ತಿಗೆ ವೈಭವ ಇದ್ದರೂ ಅದನ್ನು ಧಿಕ್ಕರಿಸಿ ಮಹಿಳೆಯರ ಸಬಲೀಕರಣಕ್ಕಾಗಿ ಕ್ರಾಂತಿ ನಡೆಸಿದರು. ಜೀವನದಲ್ಲಿ ನಿಂದನೆ, ಟೀಕೆ ಬಂದರೂ ಹೇಗೆಲ್ಲ ಎದುರಿಸಬೇಕು ಎನ್ನುವುದು ಅಕ್ಕಮಹಾದೇವಿ ಅವರು ತಮ್ಮ ವಚನದಲ್ಲಿ ಬಹಳ ಸುಂದರವಾಗಿ ವಿವರಿಸಿದ್ದಾರೆ. ಜೀವನ ಸಾರ್ಥಕತೆಗೆ ಎಲ್ಲ ಮಹಿಳೆಯರು ಅಕ್ಕನ ವಚನ ತಪ್ಪದೇ ಪಠಣ ಮಾಡಬೇಕು” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ, ಪೇದೆ

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಈ ವೇಳೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ತಾಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಮಲ್ಲಮ್ಮ ನಾಗನಕೇರೆ, ಪ್ರಮುಖರು ಶುಭಾಂಗಿ ಬಳತೆ, ಅಕ್ಷತಾ ಅಷ್ಟೂರೆ, ಪ್ರಭಾ ಕರಕಾಳೆ, ಸಾವಿತ್ರಿ ಪಾಟೀಲ್, ಸರೋಜನಿ ಪಾಟೀಲ್, ಗೀತಾ ಕರಕಾಳೆ, ಶೋಭಾ ಸಾವಳೆ, ಗಂಗಾ ಅಷ್ಟೂರೆ, ಸ್ವರೂಪಾ ಬಳತೆ, ಇಂದುಮತಿ ಮಾನಕಾರಿ, ಸಂತೋಷಿ ಹುಣಜೆ, ಪವಿತ್ರ ಮುರಾಳೆ, ವಿಮಲಾಬಾಯಿ ಚಾಕೂರೆ, ಸಿದ್ದು ತುಗಶೆಟ್ಟೆ, ವಿಜಯಕುಮಾರ ಸಜ್ಜನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X