ಮಂಡ್ಯ | ₹1.9 ಕೋಟಿ ವೆಚ್ಚದಲ್ಲಿ 109 ʼಕೂಸಿನ ಮನೆʼಗಳ ಸ್ಥಾಪನೆ: ಸಚಿವ ಎನ್ ಚಲುವರಾಯಸ್ವಾಮಿ

Date:

Advertisements

ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ 109 ʼಕೂಸಿನ ಮನೆʼಗಳ ಸ್ಥಾಪನೆಗೆ 1.9 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಪ್ರತಿ ಕೂಸಿನ ಮನೆಯನ್ನು ₹1 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲೆಕೊಪ್ಪಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ʼಕೂಸಿನ ಮನೆʼ ಉದ್ಘಾಟಿಸಿ ಮಾತನಾಡಿದರು.

“ಮೊದಲ ಹಂತದಲ್ಲಿ 21 ಗ್ರಾಮ ಪಂಚಾಯಿತಿಗಳಲ್ಲಿ ಕೂಸಿನ ಮನೆಗಳು ಉದ್ಘಾಟನೆಗೆ ಸಿದ್ಧವಾಗಿವೆ. ಅಂತೆಯೇ, ಇತರ ಗ್ರಾಮ ಪಂಚಾಯಿತಿಗಳಲ್ಲಿಯೂ ಸೌಲಭ್ಯಗಳನ್ನು ಪ್ರಾರಂಭಿಸಲಾಗುವುದು.  ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ‘ಕೂಸಿನ ಮನೆ’ ಯೋಜನೆಯನ್ನು ಘೋಷಿಸಿದ್ದರು” ಎಂದು ತಿಳಿಸಿದರು.

Advertisements

“ಮನರೇಗಾ ಅಡಿಯಲ್ಲಿ ದಾಖಲಾದ ಗ್ರಾಮೀಣ ಮಹಿಳೆಯರು ತಮ್ಮ ವೃತ್ತಿಜೀವನವನ್ನು ಮುಂದುವರಿಸಲು, ಅವಕಾಶಗಳನ್ನು ಅನ್ವೇಷಿಸಲು ಮತ್ತು ತಮ್ಮ ಮಕ್ಕಳಿಗೆ ಪೌಷ್ಟಿಕ ಆಹಾರ, ವೈದ್ಯಕೀಯ ಆರೈಕೆ ಹಾಗೂ ಸುರಕ್ಷತೆ ಒದಗಿಸಲು ಸುಮಾರು 4,000 ಕೂಸಿನ ಮನೆಗಳನ್ನು ತೆರೆಯಲು ಸರ್ಕಾರ ಪ್ರಸ್ತಾಪಿಸಿದ್ದು, ಸಾಂಕೇತಿಕವಾಗಿ ಮೂಲೆಕೊಪ್ಪಲಿನಲ್ಲಿ ಇಂತಹ ಒಂದು ಕೂಸಿನ ಮನೆ ಕೇಂದ್ರವನ್ನು ತೆರೆಯಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನೆನಪು | ಮಲೆನಾಡಿನ ಜನಮಾನಸದಲ್ಲಿ‌ ಬಂಗಾರಪ್ಪ ಇವತ್ತಿಗೂ ಉಸಿರಾಡುತ್ತಲೇ ಇದ್ದಾರೆ

“ಮಕ್ಕಳ ಮನೆಗಳಲ್ಲಿ ಮಕ್ಕಳನ್ನು ಆರೈಕೆ ಮಾಡುವವರಿಗೆ ಈ ಯೋಜನೆಯಡಿ ದಿನಕ್ಕೆ ₹316 ವೇತನದಂತೆ 100 ದಿನಗಳ ಉದ್ಯೋಗವನ್ನು ಖಾತರಿಪಡಿಸುವುದರಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಾರೆ” ಎಂದು ತಿಳಿಸಿದರು.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, “ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಕೂಸಿನ ಮನೆ’ಯ ಕಾರ್ಯನಿರ್ವಹಣೆಯ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X