ದಾವಣಗೆರೆ | ನಾಲೆಯಲ್ಲಿರುವ ಅಕ್ರಮ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿ: ಜಿಲ್ಲಾಧಿಕಾರಿ ವೆಂಕಟೇಶ್

Date:

Advertisements

ಮಳೆಯ ಕೊರತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಮತ್ತು ನಾಲೆ ಮೂಲಕ ಅಚ್ಚುಕಟ್ಟುದಾರರ ಬೆಳೆಗಳಿಗೆ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್‌ಳನ್ನು ತೆರವುಗೊಳಿಸ ಬೇಕೆಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ಎ ಸೂಚನೆ ನೀಡಿದರು.

ದಾವಣಗೆರೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ನೀರಿನ ಅಭಾವ ಉಂಟಾಗಲಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಆನ್ ಅಂಡ್ ಆಫ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಈಗಾಗಲೇ ಅಕ್ಟೋಬರ್ 26 ರಿಂದ ಭದ್ರಾ ಎಡದಂಡೆಗೆ 380 ಕ್ಯೂಸೆಕ್ ಹಾಗೂ ಭದ್ರಾ ಬಲದಂಡೆಗೆ 3‌,100 ಕ್ಯೂಸೆಕ್ ನೀರನ್ನು ಹರಿಸಲಾಗಿದೆ. ಬೆಸ್ಕಾಂ ಅಧಿಕಾರಿಗಳು ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಬೇಕು ಮತ್ತು ಅಂತಹ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು” ಎಂದರು.

Advertisements

“ಭದ್ರಾ ಬಲದಂಡೆಯ ಭಾಗದಲ್ಲಿ ರೈತರ ಜಮೀನುಗಳಲ್ಲಿ ಭತ್ತದಲ್ಲಿ ಕಾಳು ಮೂಡುತ್ತಿದ್ದು, ಈ ಸಂದರ್ಭದಲ್ಲಿ ಭತ್ತಕ್ಕೆ ನೀರಿನ ಅವಶ್ಯಕತೆ ಮುಖ್ಯವಾಗಿರುತ್ತದೆ. ಹಾಗಾಗಿ ನೀರಾವರಿ ನಿಗಮದ ಎಂಜಿನಿಯರ್‌ಗಳು ಸಕಾಲದಲ್ಲಿ ರೈತರಿಗೆ ನೀರನ್ನು ಒದಗಿಸಿ ಉತ್ತಮ ಫಸಲಿಗೆ ಸಹಕರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ₹1.9 ಕೋಟಿ ವೆಚ್ಚದಲ್ಲಿ 109 ʼಕೂಸಿನ ಮನೆʼಗಳ ಸ್ಥಾಪನೆ: ಸಚಿವ ಎನ್ ಚೆಲುವರಾಯಸ್ವಾಮಿ

“ದಾವಣಗೆರೆ ವಿಭಾಗದ ನಾಲೆಗಳಿಗೆ 7 ದಿನ ಹಾಗೂ ಮಲೆಬೆನ್ನೂರು ವಿಭಾಗದ ನಾಲೆಗಳಿಗೆ 6 ಮತ್ತು 3 ದಿನದಂತೆ ಆನ್ ಅಂಡ್ ಆಫ್ ಸಿಸ್ಟಮ್ ಅಳವಡಿಸಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಗಳಲ್ಲಿನ 9ಬಿ ಹಾಗೂ 9ಸಿ ನಾಲೆಗಳಿಗೂ ಸಹ ನೀರು ಶೀಘ್ರವೇ ತಲುಪುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ದಾವಣಗೆರೆ ತಹಶೀಲ್ದಾರ್ ಡಾ ಅಶ್ವತ್, ಹರಿಹರ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಾರ್ಯನಿರ್ವಾಹಕ ಎಂಜಿನಿಯ‌ರ್ ಮಂಜುನಾಥ್‌ ಎಂ‌ ಬಿ ಹಾಗೂ ರೈತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X