ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಜೀವ ಬೆದರಿಕೆ ಖಂಡಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ಮುತ್ತು, “ಸೊರಟೂರ ಗ್ರಾಮದಲ್ಲಿ ಅಕ್ಟೋಬರ್ 22ರಂದು ಪ್ರಬಲ ಜಾತಿ ಮರಾಠ ಸಮುದಾಯಕ್ಕೆ ಸೇರಿದ ವಿಠಲ್ ಆಶೋಕ್ ಮಲ್ಲಾಗಿ ಮತ್ತು ಮೌನೇಶ್ ಶಂಕ್ರಪ್ಪ ಮಾಲ್ಗಾರ ಎಂಬವರು ದಲಿತ ಶಿವಾನಂದ್ ಯಲ್ಲಪ್ಪ ಸಣ್ಣತಂಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾರೆ. ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಆಗ್ರಹಿಸಿದರು.
ಶತಮಾನಗಳು ಕಳೆದರು ದಲಿತ ಸಮುದಾಯದ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ಗದಗ ಜಿಲ್ಲೆಯಲ್ಲಿ ಇಂತಹ ಘಟನೆಗಳು ನೆಡೆದಿರುವುದು ವಿಷಾದಕರ ಸಂಗತಿ ಎಂದು ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಮುಖಂಡರು ಹೋರಾಟಗಾರರು, ಕಾರ್ಯಕರ್ತರು ಉಪಸ್ಥಿತರಿದ್ದರು.