ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಯಶ್ ಹಾಸ್ಪಿಟಲ್ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆ ಜಂಟಿ ದಾಳಿ ನಡೆಸಿದ್ದಾರೆ. ರೋಗಿಗಳ ನೋಂದಣಿ ಪುಸ್ತಕವನ್ನು ಪರಿಶೀಲಿಸಿದ್ದಾರೆ. ಆಸ್ಪತ್ರೆಯಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ವರದಿಗಳು ಪತ್ತೆಯಾಗಿದ್ದು, ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಿದ್ದಾರೆ.
ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ನಿರ್ಬಂಧ ಕಾಯ್ದೆಯನ್ನು ಆಸ್ಪತ್ರೆ ಉಲ್ಲಂಘಿಸಿದೆ ಎಂದು ಹೇಳಲಾಗಿದೆ.
ಆಸ್ಪತ್ರೆಯ್ಲಿ ಹೆಣ್ಣು ಭ್ರೂಣ ಪತ್ತೆ ಹಚ್ಚುವುದು ದಾಳಿ ವೇಳೆ ಪತ್ತೆಯಾಗಿದೆ. ರೋಗಿಗಳ ನೋಂದಣಿ ಪುಸ್ತಕ, ಗರ್ಭಿಣಿಯರ ಸ್ಕ್ಯಾನಿಂಗ್ ವರದಿಗಳು ದೊರೆತಿವೆ. ಆಸ್ಪತ್ರೆಯ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷೀನ್, ಸ್ಕ್ಯಾನಿಂಗ್ ಮಾಡುವ ಕೊಠಡಿಯನ್ನು ಅಧಿಕಾರಿಗಳು ಜಪ್ತಿಮಾಡಿದ್ದಾರೆ ಎಂದು ತಿಳಿದುಬಂದಿದೆ.
ಆಸ್ಪತ್ರೆಗೆ ನೋಟೀಸ್ ಜಾರಿ ಮಾಡಲಾಗಿದೆ. ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಆಸ್ಪತ್ರೆಗೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.