ಯಡಿಯೂರಪ್ಪರಲ್ಲಿ ಗುಲಾಮಿ ಮನೋಭಾವ ಮೂಡಿದ್ದು ವಿಷಾದನೀಯ: ಸಿದ್ದರಾಮಯ್ಯ ತಿರುಗೇಟು

Date:

Advertisements
  • ‘ಬಿಎಸ್‌ವೈ ಹೇಳಿಕೆ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ’
  • ‘ಯಡಿಯೂರಪ್ಪ ಅವರೇ, ಬೇಕಿದ್ದರೆ ಮೋದಿ ಕಾಲು ಹಿಡಿಯಿರಿ’ ಎಂದ ಸಿಎಂ

ಪ್ರತಿನಿತ್ಯ ಬೈದರೆ ಪ್ರಧಾನಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ” ಎಂದಿದ್ದಾರೆ.

“ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಆಗಲಿ, ದ್ವೇಷ ಆಗಲಿ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ” ಎಂದು ತಿರುಗೇಟು ನೀಡಿದ್ದಾರೆ.

Advertisements

“ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪನವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ತಲೆಯೆತ್ತಿದೆ ಫೋನ್ ಬೇಹುಗಾರಿಕೆ ಭೂತ!

“ಬಹಳ ಮುಖ್ಯವಾಗಿ ಬಿ ಎಸ್ ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ಮೋದಿಯವರ ವಿರುದ್ಧ ಮಾತ್ರ ಅಲ್ಲ, ಎಲ್.ಕೆ.ಅಡ್ವಾನಿಯವರಂತಹ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲಾ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಯಡಿಯೂರಪ್ಪನವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ” ಎಂದಿದ್ದಾರೆ.

“ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ” ಎಂದು ಪ್ರಶ್ನಿಸಿದ್ದಾರೆ.

“ಯಡಿಯೂರಪ್ಪನವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X