ಬೆಳಗಾವಿ | ಜಾತಿ ಗಣತಿಗೆ ಡಿಕೆಶಿ ವಿರೋಧ ಆರೋಪ; ಖಂಡನೆ

Date:

Advertisements

ಒಕ್ಕಲಿಗರ ಸಂಘದ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಜಾರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿರುವುದು ಖಂಡನೀಯ ಎಂದು ಅಹಿಂದ ಚೇತನ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ವಿನಾಯಕ ಕಟ್ಟಿಕರ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಅವರು ಮಾತನಾಡಿದರು. “ಗುರುವಾರ ಒಕ್ಕಲಿಗರ ಸಂಘ ಹಾಗೂ ಸರ್ಕಾರದ ಕೆಲವು ಸಚಿವರು ಶಾಸಕರು ಹಾಗೂ ಸಮಾಜದ ಪ್ರಮುಖ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಯಾವುದೇ ಕಾರಣಕ್ಕೆ ಜಾತಿ ಗಣತಿ ಜಾರಿಯಾಗದಂತೆ ಸರ್ಕಾರದ ಮೇಲೆ ಡಿ.ಕೆ ಶಿವಕುಮಾರ್ ಒತ್ತಡ ಹೇರಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಾಜದ ಮುಖಂಡರ ನಿಯೋಗದ ಮೂಲಕ ತೆರಳಿ ವರದಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲು ಮುಂದಾಗುವ ಮೂಲಕ ಅಹಿಂದ ವರ್ಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಕಾಂಗ್ರೆಸ್ ರಾಷ್ಟ್ರೀಯ ನಾಯಕರು ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಿ, ಅಹಿಂದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಹೇಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್‌ ರಾಜ್ಯಾಧ್ಯಕ್ಷರೇ ಅವರ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಇದು ಕಾಂಗ್ರೆಸ್‌ ದ್ವೀಮುಖ ನೀತಿಯನ್ನು ಎತ್ತಿ ತೋರಿಸುತ್ತಿದೆ. ಈ ಹಿಂದೆ ಅಹಿಂದ ವರ್ಗದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ತಾವೇ ಮಾಡಿಸಿರುವ ಜಾತಿ ಗಣತಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

“ಉಪ ಮುಖ್ಯಮಂತ್ರಿಗಳು ಕರ್ನಾಟಕದ ಜನತೆಗೆ ಸಮಾನ ಹಕ್ಕನ್ನು ನೀಡುವಲ್ಲಿ ವಿಫಲವಾಗುತ್ತಿದ್ದಾರೆ ಎಂಬುದಕ್ಕೆ ಗುರುವಾರ ನಡೆದ ಸಭೆಯೇ ಸಾಕ್ಷಿಯಾಗಿದೆ. ಒಂದು ವೇಳೆ ರಾಜ್ಯದ ಅಹಿಂದ ವರ್ಗದ ಹಾಗೂ ಎಲ್ಲ ಜನರ ಹಿತಕ್ಕಿಂತ ಕೇವಲ ತಮ್ಮ ಸಮುದಾಯದ ಹಿತ ಬಯಸುವದಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ದಲಿತ ಮುಖಂಡ ವಸಂತ ರಾಣ್ಣಪ್ಪಗೋಳ, ಆನಂದ ತಾಯವ್ವಗೋಳ ಹಾಗೂ ಹಿಂದೂಳಿದ ವರ್ಗದ ಮುಖಂಡರಾದ ಶಿವಪ್ಪ ನಾಯಿಕ, ಗಣೇಶ ದಳವಾಯಿ, ಮನಸೂರ ಮಕಾನದಾರ, ಬಾಬಾಜಾನ ಜಕಾತಿ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X