ಬೆಂಗಳೂರಿನ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ನವೆಂಬರ್ 5ರಂದು ಮೆಟ್ರೋ ಸೇವೆಯು ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
“ನ.5 ರಂದು ನೇರಳ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ, ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ” ಎಂದು ಹೇಳಿದೆ.
“ಬೆಳಗ್ಗೆ 9ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ” ಎಂದು ಮಾಹಿತಿ ನೀಡಿದೆ.
ಈ ಸುದ್ದಿ ಓದಿದ್ದೀರಾ? ಮಾಜಿ ಸಿಎಂ ಬೊಮ್ಮಾಯಿ ಸಂಬಂಧಿಯಿಂದ ಕಿದ್ವಾಯಿ ಸಂಸ್ಥೆಯಲ್ಲಿ ನೂರಾರು ಕೋಟಿ ಅಕ್ರಮ
“ಚಲ್ಲಘಟ್ಟ ಮತ್ತು ಎಂ.ಜಿ ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ), ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲುಗಳ ಸೇವೆಯು ಬೆಳಿಗ್ಗೆ 7 ಗಂಟೆಗೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿವೆ” ಎಂದು ಹೇಳಿದೆ.