ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ(45) ಮೃತಪಟ್ಟಿದ್ದು, ಬಸ್‌ನಲ್ಲಿದ್ದ 17 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್‌ನಲ್ಲಿ 48 ಪ್ರವಾಸಿಗರು ಇದ್ದರು. ಬೆಳಿಗಿನ ಜಾವ 4 ಗಂಟೆ ಸುಮಾರಿನಲ್ಲಿ ಬೇಲೂರು ಕಡೆಯಿಂದ ವೇಗವಾಗಿ ಬಂದ ಬಸ್, ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಾಫಿ ತೋಟಕ್ಕೆ ಉರುಳಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಬಂದು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ವೇತನ ಪಾವತಿಸದ ಟೋಲ್ ನಾಕಾ; ಗುತ್ತಿಗೆದಾರ ಆತ್ಮಹತ್ಯೆ
“ಚೀಕನಹಳ್ಳಿ–ಕಸ್ಕೈಬೈಲು ನಡುವಿನ ಈ ತಿರುವಿನಲ್ಲಿ ಇತ್ತೀಚೆಗೆ 20ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಮನವಿ ಮಾಡಿದ್ದರೂ, ಹೆದ್ದಾರಿ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಡೆಗೋಡೆ ನಿರ್ಮಾಣವಾಗಿಲ್ಲ. ಹಾಗಾಗಿ ವಾಹನಗಳು ನಿಯಂತ್ರಣಕ್ಕೆ ಸಿಗದೆ ಪ್ರಪಾತಕ್ಕೆ ಬೀಳುತ್ತಿವೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.