ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿದ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಆರ್ಥಿಕ ಸ್ಥಿತಿಯಲ್ಲಿ ಗಮನಾರ್ಹ ಬೆಳವಣಿಗೆ ಕಂಡಿದೆ ಎಂದು ಸಚಿವ ಎಚ್.ಕೆ ಪಾಟೀಲ ಹೇಳಿದರು.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಡತನ ರೇಖೆಯುಲ್ಲಿದ್ದ ಲಕ್ಷಾಂತರ ಕುಟುಂಬಗಳು ಕೇವಲ ಐದೇ ತಿಂಗಳಲ್ಲಿ ಕೆಳ ಮಧ್ಯಮ ವರ್ಗದಲ್ಲಿ ಗುರುತಿಸಿಕೊಂಡಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಶಕ್ತಿ ಯೋಜನೆಗಳು ಬಡವರ ಮುಖದಲ್ಲಿ ಮಂದಹಾಸ ಮೂಡಿಸಿವೆ” ಎಂದರು.
“ಗದಗ ಜಿಲ್ಲೆಯುಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅಪಾರ ಬೆಂಬಲ ಸಿಕ್ಕಿದೆ” ಎಂದು ಅವರು ವಿವರಿಸಿದರು.
“ನಾಡು ನುಡಿ ನೆಲ ಜಲಕ್ಕೆ ಗದಗ ಜಿಲ್ಲೆಯ ಕೊಡುಗೆ ಅಪಾರ. ಸ್ವಾತಂತ್ರ್ಯ ಹೋರಾಟ, ಕರ್ನಾಟಕ ಏಕೀಕರಣ ಹಾಗೂ ಕರ್ನಾಟಕ ನಾಮಕರಣಕ್ಕಾಗಿ ನಡೆದ ಹೋರಾಟಗಳಲ್ಲಿ ಗದಗ ಜಿಲ್ಲೆಯ ಕೊಡುಗೆ ಅಪರಿಮಿತ. ಅನೇಕ ಹೋರಾಟಗಳಿಗೆ ಗದಗ ಬೀಜಾಂಕುರ ಸ್ಥಳ” ಎಂದು ಸಚಿವ ಎಚ್ ಕೆ ಪಾಟೀಲ ಹೇಳಿದರು.
“ಗದಗ ನಗರಕ್ಕೆ ಐದು ಸಾವಿರ ಹಾಗೂ ಗದಗ ಜಿಲ್ಲೆಗೆ ಹತ್ತು ಸಾವಿರ ಮನೆಗಳನ್ನು ಕೊಡಬೇಕೆಂದು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದೇನೆ. ಎಲ್ಲರಿಗೂ ಸೂರು ಸಿಗಬೇಕು ಎನ್ನುವುದೇ ಇದರ ಮುಖ್ಯ ಉದ್ದೇಶವಾಗಿದೆ. ಗದಗ ಜಿಲ್ಲೆಯು ಜನರ ವಸತಿ ರಹಿತರ ಸಮಸ್ಯೆಗೆ ಮುಖ್ಯಮಂತ್ರಿ ಅವರು ಸ್ಪಂದಿಸುತ್ತಾರೆ ಎಂಬ ನಂಬಿಕೆ ಇದೆ” ಎಂದರು.