2021ನೇ ಸಾಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಂತಿಮ ಆಯ್ಕೆಪಟ್ಟಿಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ.
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು, 2020 ರನ್ವಯ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಮತ್ತು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಈ ಮೂಲಕ ಪ್ರಕಟಿಸಿದೆ.
ಇದರಲ್ಲಿ 2015ರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದ ಭರ್ತಿಯಾಗದಿರುವ ಹುದ್ದೆಗಳಿಗೆ ಮತ್ತು ಪುಸ್ತುತ ನೇಮಕಾತಿಯಲ್ಲಿನ ವಿಷಯವಾರು, ಸ್ಥಳೀಯ ವೃಂದ, ಮಿಕ್ಕುಳಿದ ವೃಂದ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ‘ಸಿ’ ವರ್ಗದ ಸಿಬ್ಬಂದಿಗಳಿಗೆ ಮೀಸಲಿರಿಸಿದ ಹುದ್ದೆಗಳಿಗೆ ಆಯ್ಕೆಯಾದ ಸಿಬ್ಬಂದಿಗಳ ಪ್ರತ್ಯೇಕ ಆಯ್ಕೆ ಪಟ್ಟಿ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://erajyapatra.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ.