ದಾವಣಗೆರೆ | ಕಾರ್ಮಿಕರ ಮಕ್ಕಳಿಗೆ ಶೀಘ್ರದಲ್ಲಿ ವಿದ್ಯಾರ್ಥಿ ವೇತನ; ಸಚಿವ ಸಂತೋಷ್ ಲಾಡ್

Date:

Advertisements

ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ ಸಂಘಟಿತ, ಅಸಂಘಟಿತ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಂದ ಅಹವಾಲು ಆಲಿಸಿ ಸರ್ಕಾರದಿಂದ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಅವರು ಮಾತನಾಡಿದರು.

ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಈ ಪ್ರಕ್ರಿಯೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು.

Advertisements

ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಉಳಿಸಿ ಬೆಳೆಸುವ ಮೂಲಕ ಇದರ ಸಾಮರ್ಥ್ಯವನ್ನು ಇನ್ನೂ ಹೆಚ್ಚಿಸಲು ಹೊಸ ಕಾನೂನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೊಸ ಟೆಕ್ನಾಲಜಿ ಆಪ್ ಬಿಡುಗಡೆ ಮಾಡಲಾಗುತ್ತದೆ. ಹೊಸ ಟೆಕ್ನಾಲಜಿಯಿಂದ ಎಲ್ಲ ಮಾಹಿತಿಯು ಸಂಗ್ರಹವಾಗಲಿರುವುದರಿಂದ ಸೆಸ್ ಸಂಗ್ರಹ ಮತ್ತು ನಿರ್ವಹಣೆ ಸುಲಭವಾಗಲಿದೆ.

ಮನೆ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಇ-ಕಾಮರ್ಸ್‍ನಲ್ಲಿ ಕೆಲಸ ಮಾಡುವವರಿಗೆ ʼಗಿಗ್ʼ ಕಾರ್ಮಿಕರೆಂದು ಕರೆಯಲಾಗುತ್ತದೆ. ಇವರಿಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಉದ್ದೇಶಿಸಲಾಗಿದ್ದು, ಮನೆ ಕೆಲಸದ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಆಸ್ತಿ ತೆರಿಗೆಯಲ್ಲಿ ಸೆಸ್ ಸಂಗ್ರಹಿಸುವ ಮೂಲಕ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶವಿದ್ದು, ಈ ವರ್ಷದಲ್ಲಿ ಅನುಷ್ಟಾನಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಮಿಕರ ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆಯನ್ನು ಸ್ಥಾಪಿಸಲಾಗುತ್ತಿದ್ದು ಕನಿಷ್ಠ ವೇತನವನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರಿಗೆ ಟೋಲ್ ಫ್ರೀ ಸಂಖ್ಯೆಯಿಂದ ಪರಿಹಾರ, ತಾತ್ಕಾಲಿಕ ಸಹಾಯ ಮತ್ತು ಕುಂದುಕೊರತೆಗಳ ನಿವಾರಣೆಗೆ ಸಹಕಾರಿಯಾಗಲಿದೆ.

ಹೊರಗುತ್ತಿಗೆ ಕಾರ್ಮಿಕರ ಹಿತ ಕಾಪಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾವಾರು ಹೊರಗುತ್ತಿಗೆ ಸೊಸೈಟಿ ಮಾಡುವ ಮೂಲಕ ಈಗಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಸೊಸೈಟಿ ಮೂಲಕ ಇಪಿಎಫ್, ಇಎಸ್‍ಐ ಸೌಲಭ್ಯಗಳು ತ್ವರಿತಗತಿಯಲ್ಲಿ ಸಿಗುವಂತೆ ಮಾಡಲು ಉದ್ದೇಶಿಸಲಾಗಿದೆ. ಸರ್ಕಾರಿ ವಲಯದಲ್ಲಿ ವಿವಿಧ ಜಿಲ್ಲೆಗಳಲ್ಲಿ 4 ಲಕ್ಷಕ್ಕಿಂತ ಅಧಿಕ ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದು ಇವರೆಲ್ಲರಿಗೂ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಟ್ರೇಡ್ ಯೂನಿಯನ್ ಪದಾಧಿಕಾರಿಗಳು, ಎಐಟಿಸಿ ಪದಾಧಿಕಾರಿಗಳು, ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಟೈಲರ್ ಸಂಘದ ಪದಾಧಿಕಾರಿಗಳು, ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು, ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ, ಕಾರ್ಮಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಯಿಸಿನ್, ಆಯುಕ್ತ ಡಾ. ಎಚ್.ಎನ್. ಗೊಪಾಲಕೃಷ್ಣ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಡಿ. ಭಾರತಿ, ಪ್ಯಾಕ್ಟರೀಸ್ ಮತ್ತು ಬಾಯ್ಲರ್ಸ್ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X