ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.
ಈ ಬಗ್ಗೆ ನೈರುತ್ಯ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. (ರೈಲು ಸಂಖ್ಯೆ 06231/06232) ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್) ಹೊರಡಲಿದೆ.
(ರೈಲು ಸಂಖ್ಯೆ 06231) ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ನವೆಂಬರ್ 10ರಂದು ಬೆಂಗಳೂರಿನಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10:55ಕ್ಕೆ ವಿಜಯಪುರ ತಲುಪಲಿದೆ.
ರೈಲು ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ತೋರಣಗಲ್ಲು, ಹೊಸಪೇಟೆ, ಮುನಿರಾಬಾದ್, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
(ರೈಲು ನಂ.06232) ವಿಜಯಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ವಿಜಯಪುರದಿಂದ ನವೆಂಬರ್ 14 ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 09:30ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಬರಲಿದೆ.
ಈ ವಿಶೇಷ ರೈಲು ಆಲಮಟ್ಟಿ, ಬಾಗಲಕೋಟೆ, ಬಾದಾಮಿ, ಗದಗ, ಕೊಪ್ಪಳ, ಮುನಿರಾಬಾದ್, ಹೊಸಪೇಟೆ, ತೋರಣಗಲ್ಲು, ಬಳ್ಳಾರಿ ಕ್ಯಾಂಟ್, ರಾಯದುರ್ಗ, ಚಿತ್ರದುರ್ಗ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ ಮತ್ತು ತುಮಕೂರು ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಎಸ್ಎಮ್ವಿಟಿ ಬೆಂಗಳೂರು–ಬೆಳಗಾವಿ– ಎಸ್ಎಮ್ವಿಟಿ ಬೆಂಗಳೂರು
(ರೈಲು ಸಂಖ್ಯೆ 06585) ಎಸ್ಎಮ್ವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್) ನವೆಂಬರ್ 10ರಂದು ಎಸ್ಎಮ್ವಿಟಿ ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 8 ಗಂಟೆಗೆ ಬೆಳಗಾವಿಗೆ ತೆರಳಲಿದೆ.
ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ ಮತ್ತು ಲೋಂಡಾನಲ್ಲಿ ನಿಲುಗಡೆ ಹೊಂದಲಿದೆ.
(ರೈಲು ಸಂಖ್ಯೆ 06586) ಬೆಳಗಾವಿ- ಎಸ್ಎಮ್ವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ನವೆಂಬರ್ 14ರಂದು ಸಂಜೆ 6:50 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಗ್ಗೆ 6 ಗಂಟೆಗೆ ಎಸ್ಎಮ್ವಿಟಿ ಬೆಂಗಳೂರಿಗೆ ಆಗಮಿಸುತ್ತದೆ.
ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.
ಎರಡೂ ವಿಶೇಷ ರೈಲುಗಳು ಒಂದು ಎಸಿ-2 ಶ್ರೇಣಿ, ಮೂರು ಎಸಿ-3 ಶ್ರೇಣಿ, ಎಂಟು ಸ್ಲೀಪರ್ ವರ್ಗ, ಎರಡು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎರಡನೇ ದರ್ಜೆಯ ಲಗೇಜ್ ಕಮ್ ಬ್ರೇಕ್-ವ್ಯಾನ್ಗಳು/ಅಂಗವಿಕಲ ಸ್ನೇಹಿ ವಿಭಾಗಗಳು ಸೇರಿದಂತೆ ಒಟ್ಟು ಹದಿನಾರು ಕೋಚ್ಗಳನ್ನು ಒಳಗೊಂಡಿರುತ್ತವೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಕೊಲೆ ಪ್ರಕರಣ; ಓರ್ವ ಪೊಲೀಸ್ ವಶಕ್ಕೆ
ಹೆಚ್ಚಿನ ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸುವಿಕೆ ವಿವರಗಳಿಗಾಗಿ, ಇಲಾಖೆಯ ಅಧಿಕೃತ ವೆಬ್ಸೈಟ್ https://enquiry.indianrail.gov.in ಗೆ ಭೇಟಿ ನೀಡಿ ಅಥವಾ 139 ಅನ್ನು ಡಯಲ್ ಮಾಡಿ ಅಥವಾ ನಿಮ್ಮ ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಿ ಎಂದು ತಿಳಿಸಿದೆ.