- ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಆಯೋಗ
- 7ನೇ ವೇತನ ಆಯೋಗದ ಅವಧಿ 2023 ನವೆಂಬರ್ 18ಕ್ಕೆ ಅವಧಿ ಮುಗಿಯಬೇಕಿತ್ತು
ವೇತನ ಪರಿಷ್ಕರಣೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರು ಇದಕ್ಕಾಗಿ ಇನ್ನೂ ಕೆಲವು ದಿನಗಳ ಕಾಲ ಕಾಯಬೇಕಾಗಿದೆ. ಇದಕ್ಕೆ ಪ್ರಮುಖ ಕಾರಣ ವೇತನ ಪರಿಷ್ಕರಣೆಗೆ ನೇಮಿಸಿದ್ದ 7ನೇ ವೇತನ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿದೆ.
ನೌಕರರ ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ಹಿಂದಿನ ಸರ್ಕಾರ ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು ಆಯೋಗ ರಚಿಸಿತ್ತು. ಈ ಆಯೋಗ ತನ್ನ ಶಿಫಾರಸುಗಳ ವರದಿ ಸಲ್ಲಿಸಲು 6 ತಿಂಗಳ ಗಡುವು ನೀಡಲಾಗಿತ್ತು.
ನಂತರ ಇದರ ಅವಧಿಯನ್ನು ಕಳೆದ ಮೇ 15 ರಂದು ಮತ್ತೆ 6 ತಿಂಗಳುಗಳ ಕಾಲ ವಿಸ್ತರಿಸಿತ್ತು. ಹೀಗಾಗಿ 2023 ನವೆಂಬರ್ 18ಕ್ಕೆ ಅವಧಿ ಮುಗಿಯಬೇಕಿತ್ತು. ಆದರೆ ಇದೀಗ ಇದರ ಅವಧಿಯನ್ನು ಮತ್ತೆ ಮುಂದಿನ ವರ್ಷ ಮಾರ್ಚ್ 15 ರವರೆಗೆ ವಿಸ್ತರಿಸಿದೆ. ಇದರಿಂದಾಗಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಹಿರಿಯ ರಾಜಕಾರಣಿ ಡಿ.ಬಿ ಚಂದ್ರೇಗೌಡ ಇನ್ನಿಲ್ಲ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಾಣಿಕೆ ಮಾಡುವ ಸವಾಲು ಸರ್ಕಾರದ ಮುಂದಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ತಕ್ಷಣಕ್ಕೆ ನೌಕರರ ವೇತನ ಪರಿಷ್ಕರಣೆ ಮಾಡಿದರೆ ಆರ್ಥಿಕ ಹೊರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆಯೋಗದ ವರದಿಯನ್ನು ತಡವಾಗಿ ಪಡೆದುಕೊಂಡರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.
ನೌಕರನನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ , ಇದು. ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿದೆ ಎಂದು ತೋರುತ್ತದೆ ಕಾಲಹರಣ
ಮಾಡೋದೇ ಆದರೆ ಸರ್ಕಾರದ ಕ್ರಮ ಸರಿಯಾದುದಲ್ಲ. ಪ್ರತಿಯೊಬ್ಬ ಪ್ರಜೆಗೂ ಸರ್ಕಾರಿ ಸೌಲಭ್ಯ ಕಲ್ಪಿಸುವ ಮೂಲಕ ತನ್ನ ಸೇವೆಗೈಯುವ ನೌಕರನಿಗೆ ಬೆದರಿಕೆಯೊಡ್ಡಿ ಈ ರೀತಿಯ ವರ್ತನೆ ಯಾಕೆ ಅಂತ ಹೇಳಿ
ಮಾನ್ಯ ಮುಖ್ಯಮಂತ್ರಿ ಗಳು ಸಿದ್ದರಾಮಯ್ಯ ನವರು ನೌಕರರ ಬಗ್ಗೆ ಉದಾಸೀನ ಮಾಡಿದರು ಎಂಬುದು ತಿಳದುಬಂದಿಲ್ಲ ಮಾನ್ಯರು ಹೇಳಿದಂತೆ ನಡೆದುಕೊಳ್ಳಬೇಕು ಎಂದು ನಮ್ಮ ಹೃದಯಾಲಯದ
ಕೋರಿಕೆ🙏🙏🙏🙏🙏🙏🙏🙏🙏🙏🙏🙏🙏🙏🙏