ಗದಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು, ಎಂಜಿನಿಯರಿಂಗ್, ಮೆಡಿಕಲ್, ಬಿಎಡ್ ಹಾಗೂ ಪ್ಯಾರಾಮೆಡಿಕಲ್ ಕೋರ್ಸ್‌ಗಳು ಪ್ರಾರಂಭವಾಗುವ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾರೆ.
ವಸತಿನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಕಡ್ಡಾಯವಾಗಿ www.sw.kar.nic.in ವೆಬ್‍ಸೈಟ್‍ನಲ್ಲಿ 2023-24 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಎಂಬ ಲಿಂಕ್‍ನಡಿ ಎಸ್‌ಎಚ್‌ಪಿ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಮೂಲಕ ವಿದ್ಯಾರ್ಥಿಗಳು ಖಾತೆ ಸೃಜಿಸಿದ ನಂತರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ. ಗದಗ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಗದಗ 08372-297258/9480843128.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಹಿರಿಯ ರಾಜಕಾರಣಿ ಡಿ.ಬಿ ಚಂದ್ರೇಗೌಡ ಇನ್ನಿಲ್ಲ
ರೋಣ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ರೋಣ 08381-267120/9480843131, ಶಿರಹಟ್ಟಿ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಶಿರಹಟ್ಟಿ 08487-242312/9480843132, ಮುಂಡರಗಿ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ 08371-262449/9480843129, ನರಗುಂದ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ನರಗುಂದ 08377-245731/9480843130.