ದಾವಣಗೆರೆ | ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಮೂಲಸೌಕರ್ಯ ರದ್ದು; ರೈತ ಮೋರ್ಚಾ ಖಂಡನೆ

Date:

Advertisements

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್ ಫಾರ್ಮರ್ ಸಹಿತ ಮೂಲ ಸೌಲಭ್ಯ ಒದಗಿಸುವ ಯೋಜನೆ ರದ್ದು ಮಾಡಿದೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು ಆದೇಶಿಸಿದೆ. ಇದನ್ನು ದಾವಣಗೆರೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಖಂಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ನಾಗರಾಜ್‌ ಲೋಕಿಕೆರೆ, ಬರದಿಂದ ಕಂಗಾಲಾಗಿರೊ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ಡಿ.ಎಂ. ವಿನೋದ್‌ ಕುಮಾರ್ ಕಳೆದ ಅ.7ರಂದು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸೆ.22ರ ನಂತರ ನೋಂದಣಿ ಆಗುವ ನೀರಾವರಿ ಪಂಪ್‌ಸೆಟ್‌ಗಳಿಗೆ ರೈತರು ತಮ್ಮ ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು ಸಷ್ಟವಾಗಿ ತಿಳಿಸಿದ್ದಾರೆ.

ಸರ್ಕಾರದ ಹೊಸ ಆದೇಶದ ಹಿನ್ನಲೆ ರೈತರು ತಮ್ಮ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪಡೆಯಲು ಲಕಾಂತರ ರೂಪಾಯಿ ಹಣ ಖರ್ಚುಮಾಡಬೇಕಿದೆ. ಕಳೆದ ಹತ್ತು ವರ್ಷದಿಂದ ಅಕ್ರಮ – ಸಕ್ರಮ ಜಾರಿಯಲ್ಲಿತ್ತು. ಪಂಪ್ ಸೆಟ್ ಮೂಲಕ ನೀರಾವರಿ ಮಾಡುವ ರೈತರಿಗೆ ಇಂಧನ ಇಲಾಖೆಯ ಈ ಯೋಜನೆ ವರವಾಗಿತ್ತು. ರೈತರು ಸುಮಾರು 20ಸಾವಿರ ರೂ. ಶುಲ್ಕ ಪಾವತಿಸಿ ನೀರಾವರಿ ಪಂಪ್‌ಸೆಟ್‌ ವಿದ್ಯುತ್ ಸಂಪರ್ಕ ಪರವಾನಗಿ ಪಡೆದರೆ, ವಿದ್ಯುತ್ ಕಂಪನಿಗಳೇ ಆ ರೈತನ ಹೊಲಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿತ್ತು.

Advertisements

ಆದರೆ, ಸರ್ಕಾರದ ಹೊಸ ನೀತಿಯಿಂದ ವಿದ್ಯುತ್ ಜಾಲ ಎಷ್ಟೇ ದೂರವಿದ್ದರೂ ಸ್ವಂತ ಹಣದಲ್ಲೇ ವಿದ್ಯುತ್‌ ಕಂಬ ಮತ್ತು ತಂತಿ ಹಾಕಿಕೊಳ್ಳಬೇಕಿದೆ. ಜೊತೆಗೆ ಲಕ್ಷಾಂತರ ರೂ. ಖರ್ಚು ಮಾಡಿ ಟ್ರಾನ್ಸ್‌ಫಾರ್ಮ‌ ಪಡೆಯಬೇಕಿದೆ. ಇದು ರೈತರಿಗೆ ಭಾರಿ ಸಂಕಷ್ಟ ತಂದೊಡ್ಡಿದೆ. ರೈತರಿಗೆ ನೋಂದಣಿ ಶುಲ್ಕ ಪಾವತಿಸುವುದೇ ಕಷ್ಟವಾಗಿತ್ತು. ಸರ್ಕಾರದ ಹೊಸ ನೀತಿಯಿಂದ ರೈತರು ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂ. ಖರ್ಚು ಮಾಡಬೇಕಿದೆ.

ಪ್ರಸ್ತುತ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ ಬರಪೀಡಿತ ಎಂದು ಘೋಷಿಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಸಂಗತಿಯಾಗಿದೆ.

ಹಿಂದಿನ ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ನೆಪವೊಡ್ಡಿ ರದ್ದು ಮಾಡಲಾಗಿದೆ. ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ನೀಡಿಲ್ಲ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ, ಹೀಗಾಗಿ ರೈತನ ಬದುಕು ಅತ್ಯಂತ ಅಸಹನೀಯವಾಗಿದೆ ಎಂದು ದೂರಿದರು.

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್ ಸಂಪರ್ಕ ನೀಡಬೇಕಾಗಿ ಸರ್ಕಾರವನ್ನು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಒತ್ತಾಯಿಸುತ್ತದೆ. ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮರು 35ಲಕ್ಷ ಪಂಪ್‌ಸೆಟ್‌ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊಳೇನಹಳ್ಳಿ ಬಿ.ಎಂ.ಸತೀಶ್, ಕಡ್ಲೆಬಾಳು ಧನಂಜಯ್, ಗುರುನಾಥ್, ಬಾತಿ ಶಿವಕುಮಾರ್, ಅಣಜಿ ಗುಡೇಶ್, ಕುಂದುವಾಡ ಗಣೇಶ್‌, ರೇವಣಸಿದ್ದಪ್ಪ, ಕಡ್ಲೆಬಾಳು ಬಸವರಾಜ್, ಅಣಬೇರು ಶಿವಪ್ರಕಾಶ್ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X