ಪ್ರಧಾನ ಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಸಿದ್ದರಾಮಯ್ಯ ಪ್ರಶ್ನೆ

Date:

Advertisements
  • ‘ಕುಮಾರಸ್ವಾಮಿ ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ’
  • ‘ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುತ್ತಿಲ್ಲ’

ಪ್ರಧಾನ ಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ? ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮೋದಿ ಮಾತನಾಡಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಮಾತನಾಡಿ, “ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ. ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು” ಎಂದರು.

Advertisements

ಪರಿಶೀಲನೆ ನಂತರ ಲೋಕಸಭಾ ಅಭ್ಯರ್ಥಿ ತೀರ್ಮಾನ

ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಯತ್ನಾಳ್ ಶೇಮ್‌ಲೆಸ್ ವ್ಯಕ್ತಿ

ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ “ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು” ಎಂದರು.

“ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುತ್ತಿಲ್ಲ. ಬದಲಿಗೆ ಪರಿಹಾರ ನೀಡಿ ಎಂದು ಕೇಳುತ್ತಿದ್ದೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕರ್ನಾಟಕ ರಾಜ್ಯದಲ್ಲಿ ಬರ ಬಂದರೆ ಕೇಂದ್ರ ಸರ್ಕಾರದ್ದೂ ಜವಾಬ್ದಾರಿ ಇರುತ್ತದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತೆರಿಗೆ ನೀಡುತ್ತದೆ. ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಅನುದಾನವಿರುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

ಕಿಯೋನಿಕ್ಸ್ ಎಂಡಿ ಲಂಚ: ವಿಚಾರಣೆ

“ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕರ ಸಂಗಪ್ಪ 300 ಕೋಟಿ ಹಣ ಬಿಡುಗಡೆ ಮಾಡಲು 38 ಲಕ್ಷ ಲಂಚ ಕೇಳುತ್ತಿರುವ ಕುರಿತು ಮಾತನಾಡಿ, “ಈ ಬಗ್ಗೆ ವಿಚಾರಣೆ ಮಾಡಲಾಗುವುದು. ತನಿಖೆ ನಡೆಸಿ, ಆರೋಪ ಸಾಬೀತಾದರೆ ಅವರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

ದೇಗುಲದ ಆಚರಣೆಗಳನ್ನು ಜನ ನಂಬುತ್ತಾರೆ

ಹಾಸನಾಂಬ ದೇಗುಲದಲ್ಲಿ ಕೆಲವು ಮೌಢ್ಯಾಚರಣೆಗಳು ಇದ್ದು, ಸಿಎಂ ಭೇಟಿ ಇದಕ್ಕೆ ಪುಷ್ಟಿ ನೀಡಿದಂತಾಗುವುದಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ಕೆಲವು ಮೌಢ್ಯಗಳನ್ನು ಹಿಂದಿನಿಂದ ಆಚರಿಸಿಕೊಂಡು ಬರಲಾಗಿದೆ. ಸರ್ಕಾರ ಮೌಢ್ಯ ವಿರೋಧಿ ಕಾಯ್ದೆಯನ್ನೂ ಜಾರಿ ಮಾಡಿದೆ. ನಾನು ಪ್ರಜ್ಞಾಪೂರ್ವಕವಾಗಿ ಯಾವುದೇ ಮೌಢ್ಯಗಳನ್ನು ಪಾಲಿಸುವುದಿಲ್ಲ. ಆದರೆ ದೇವರಲ್ಲಿ ನಂಬಿಕೆ ಇರಿಸಿದ್ದೇನೆ” ಎಂದು ಹೇಳಿದರು.

7 ಗಂಟೆ ವಿದ್ಯುತ್ ಪೂರೈಕೆಗೆ ತೀರ್ಮಾನ 

ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, “800 ಮೆಗಾ ವ್ಯಾಟ್ ನಷ್ಟು ಥರ್ಮಲ್ ವಿದ್ಯುತ್ ಅನ್ನು ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ರಾಜ್ಯದ ಬಳಕೆಗೆ ಲಭ್ಯವಾಗಬೇಕು ಎಂಬ ಆದೇಶ ಹೊರಡಿಸಲಾಗಿದೆ. ಸಕ್ಕರೆ ಕಾರ್ಖಾನೆಗಳ ಪ್ರಾರಂಭದಿಂದಾಗಿ ವಿದ್ಯುತ್ ಕೋಜನರೇಷನ್ ಸಾಧ್ಯವಾಗುತ್ತಿದ್ದು, ಸುಮಾರು 450 ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತದೆ. ಈ ಎಲ್ಲ ಕ್ರಮಗಳಿಂದ ಮೂರು ಫೇಸ್ ಗಳಲ್ಲಿ ಸತತ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ತೀರ್ಮಾನಿಸಲಾಗಿದೆ” ಎಂದರು.

ವೈದ್ಯಕೀಯ ಕಾಲೇಜು ನಿರ್ದೇಶಕರ ನೇಮಕಕ್ಕೆ ಕ್ರಮ

ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕರ ರಾಜೀನಾಮೆಯಿಂದ ಖಾಲಿ ಹುದ್ದೆಗೆ ನೇಮಕಾತಿ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿರುವುದಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪರಿಶೀಲಿಸಿ ಕೂಡಲೇ ಬೇರೆಯವರನ್ನು ಹುದ್ದೆಗೆ ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ಮಳೆ

ಬೆಂಗಳೂರಿನಲ್ಲಿ ಸಾಕಷ್ಟು ಮಳೆಯಾಗಿ ತೊಂದರೆಯಾಗಿರುವ ಬಗ್ಗೆ ಮಾತನಾಡಿ, ಸಾರ್ವಜನಿಕ ಆಸ್ತಿಪಾಸ್ತಿಗೆ ತೊಂದರೆಯಾಗಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X