ತನಿಖಾ ಸಂಸ್ಥೆಗಳಿಂದ ಸರ್ಕಾರ ನಡೆಸಲು ಸಾಧ್ಯವಾಗದು; ಪತ್ರಿಕಾ ಸ್ವಾತಂತ್ರ್ಯದ ಪರ ಸುಪ್ರೀಂ ಬ್ಯಾಟಿಂಗ್

Date:

Advertisements

ಮಾಧ್ಯಮ ಪ್ರತಿನಿಧಿಗಳು ಸುದ್ದಿ ಸಂಗ್ರಹಿಸಲು ತಮ್ಮದೇ ಆದ ಮೂಲಗಳನ್ನು ಹೊಂದಿದ್ದಾರೆ ಮತ್ತು ತನಿಖಾ ಸಂಸ್ಥೆಗಳು ಯಾವುದೇ ರೀತಿಯ ತನಿಖೆಗಾಗಿ ಪತ್ರಕರ್ತರ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಳ್ಳುವುದಕ್ಕೆ ಕೇಂದ್ರವು ಪ್ರತ್ಯೇಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಪತ್ರಕರ್ತರ ಸಾಧನಗಳನ್ನು ವಶಪಡಿಸಿಕೊಳ್ಳುವ ಕಾನೂನು ಜಾರಿ ಸಂಸ್ಥೆಗಳಿಗೆ ವಿವರವಾದ ಮಾರ್ಗಸೂಚಿಗಳನ್ನು ಕೋರಿರುವ ಫೌಂಡೇಶನ್ ಫಾರ್ ಮೀಡಿಯಾ ಪ್ರೊಫೆಷನಲ್ಸ್‌ನ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠ ತನಿಖಾ ಸಂಸ್ಥೆಗಳಿಂದ ಸರ್ಕಾರ ನಡೆಸಲು ಸಾಧ್ಯವಾಗದು ಎಂದು ಹೇಳಿದೆ.

“ಪತ್ರಕರ್ತರ ಸಾಧನಗಳನ್ನು ವಶಪಡಿಸಿಕೊಂಡಿರುವುದು ಗಂಭೀರ ವಿಷಯವಾಗಿದೆ. ಮಾಧ್ಯಮ ಸಂಸ್ಥೆಗಳ ವೃತ್ತಿಪರರಿಗೆ ಉತ್ತಮ ಮಾರ್ಗಸೂಚಿಗಳು ಇರಬೇಕು. ಮಾಧ್ಯಮ ವೃತ್ತಿಪರರು ತಮ್ಮದೇ ಆದ ಮೂಲಗಳನ್ನು ಹೊಂದಿದ್ದಾರೆ. ನಾವು ಖಾಸಗಿತನದ ಮೂಲಭೂತ ಹಕ್ಕನ್ನು ಹೊಂದಿದ್ದೇವೆ. ಇದರಲ್ಲಿ ಸಮತೋಲನ ಇರಬೇಕು. ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 6ಕ್ಕೆ ಕೈಗೆತ್ತಿಕೊಳ್ಳಲಾಗುವುದು” ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

Advertisements

ಕೇಂದ್ರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ನ್ಯಾಯಾಲಯದ ಮುಂದಿರುವ ವಿಷಯವು ಸಂಕೀರ್ಣ ಕಾನೂನು ಸಮಸ್ಯೆಗಳಿಗೆ ಸಂಬಂಧಿಸಿದೆ. ಮಾಧ್ಯಮಗಳಿಗೂ ಹಕ್ಕುಗಳಿವೆ, ಆದರೆ ಅದು ಕಾನೂನಿಗಿಂತ ಮೇಲಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದೆಹಲಿ ವಾಯು ಮಾಲಿನ್ಯ: 4 ರಾಜ್ಯಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರೀಂ ಆದೇಶ

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಪ್ರಕರಣವು ರಾಷ್ಟ್ರದ ವಿರುದ್ಧ ಗೌಪ್ಯತೆಗೆ ಸಂಬಂಧಿಸಿದ ದೋಷಾರೋಪಣೆಗೆ ಸಂಬಂಧಿಸಿದೆ. ಈಗ ಅವರು ಪಾಸ್‌ವರ್ಡ್‌ಗಳು ಅಥವಾ ಬಯೋಮೆಟ್ರಿಕ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸುತ್ತಾರೆ. ವೈಯಕ್ತಿಕ ಡೇಟಾ, ಹಣಕಾಸಿನ ಡೇಟಾ ಎಲ್ಲ ಡಿಜಿಟಲ್ ಮಾಹಿತಿಗಳು ಆ ಸಾಧನದಲ್ಲಿರುವ ಕಾರಣ ಅವರು ಏನನ್ನು ವಶಪಡಿಸಿಕೊಳ್ಳುತ್ತಾರೆ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಮಾರ್ಗಸೂಚಿಗಳಿಲ್ಲ” ಎಂದು ಹೇಳಿದರು

ಈ ಪ್ರಕರಣದಲ್ಲಿ ಯಾವ ರೀತಿಯ ಮಾರ್ಗಸೂಚಿಗಳ ಅಗತ್ಯವಿದೆ ಎಂಬುದನ್ನು ಕೇಂದ್ರವು ವಿಶ್ಲೇಷಿಸಬೇಕು.ಸಾಲಿಸಿಟರ್ ಜನರಲ್ ಅವರು ಈ ಬಗ್ಗೆ ಸ್ಪಷ್ಟ ಕಾರ್ಯಸೂಚಿಯೊಂದಿಗೆ ಹಿಂತಿರುಗಲು ನಾವು ಬಯಸುತ್ತೇವೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಈ ಹಿಂದೆ, 16 ಪತ್ರಿಕಾ ಸಂಘಟನೆಗಳು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು, ಮಾಧ್ಯಮಗಳ ವಿರುದ್ಧ ತನಿಖಾ ಸಂಸ್ಥೆಗಳ “ದಮನಕಾರಿ” ಬಳಕೆಯನ್ನು ಕೊನೆಗೊಳಿಸಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯನ್ನು ಕೋರಿದ್ದವು. ಪತ್ರಕರ್ತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪೊಲೀಸರು ವಶಪಡಿಸಿಕೊಳ್ಳುವ ಕುರಿತು ಅವರು ಮಾರ್ಗಸೂಚಿಗಳನ್ನು ಅಳವಡಿಸಲು ನಿರ್ದೇಶಿಸುವಂತೆ ಮನವಿ ಮಾಡಿದ್ದರು.

ಸುದ್ದಿ ಪೋರ್ಟಲ್ ‘ನ್ಯೂಸ್‌ಕ್ಲಿಕ್‌’ಗೆ ಸಂಬಂಧಿಸಿದ ಪತ್ರಕರ್ತರು, ಸಂಪಾದಕರು ಮತ್ತು ಬರಹಗಾರರ ಮನೆಗಳ ಮೇಲೆ ಕೆಲವು ದಿನಗಳ ಹಿಂದೆ ದೆಹಲಿ ಪೊಲೀಸರು ದಾಳಿ ನಡೆಸಿದ ನಂತರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ. ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದೆ. ವೆಬ್ ಪೋರ್ಟಲ್, ಚೀನಾ ಪರ ಪ್ರಚಾರ ಮಾಡಲು ಹಣವನ್ನು ಪಡೆದಿದೆ ಎಂದು ಇವರಿಬ್ಬರ ಮೇಲೆ ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X