ಹಾವೇರಿ | ಸಮುದಾಯದ ಅಭಿವೃದ್ಧಿಗೆ ಮಹಿಳೆಯರು ಕೈಜೋಡಿಸಬೇಕು: ಸಿಸ್ಟರ್ ಶಾಂತಿ ಡಿಸೋಜಾ

Date:

Advertisements

ಮಹಿಳೆಯರು ನಾಯಕತ್ವ ಬೆಳೆಸಿಕೊಂಡು, ಮುಂದಾಳತ್ವದೊಂದಿಗೆ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದರೆ, ಜನರು ನಮ್ಮನ್ನು ಗುರುತಿಸಿ ನಮ್ಮ ಜೊತೆ ಇರುತ್ತಾರೆ ಮತ್ತು ನಮ್ಮ ನಾಯಕತ್ವವನ್ನು ಒಪ್ಪಿಕೊಳ್ಳುತ್ತಾರೆ. ಆದ್ದರಿಂದ ಒಕ್ಕೂಟದ ಪದಾಧಿಕಾರಿಗಳು ಪ್ರತಿಯೊಬ್ಬರೂ ಮಹಿಳೆಯರ ಏಳಿಗೆಗೆ ಶ್ರದ್ಧೆಯಿಂದ ಶ್ರಮಿಸಿದರೆ ಅವರ ಕುಟುಂಬದ ಏಳಿಗೆಗೆ ಶ್ರಮಿಸಿದಂತಾಗುತ್ತದೆ ಎಂದು ರೋಶನಿ ಸಮಾಜ ಸೇವಾ ಸಂಸ್ಥೆಯ ಸಹ ನಿರ್ದೇಶಕಿ ಸಿಸ್ಟರ್ ಶಾಂತಿ ಡಿಸೋಜಾ  ಹೇಳಿದರು.

ರೋಶನಿ ಸಮಾಜ ಸೇವಾ ಸಂಸ್ಥೆ ಹಾನಗಲ್‌ನಲ್ಲಿ ಹಮ್ಮಿಕೊಂಡಿದ್ದ ಆದರ್ಶ ತಾಲೂಕು ಮಹಿಳಾ ಒಕ್ಕೂಟದ ಸಭೆಗೆ ಮಾರ್ಗದರ್ಶಕರಾಗಿ ಆಗಮಿಸಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒಕ್ಕೂಟದ ಅಧ್ಯಕ್ಷೆ ಪ್ರೇಮಾ ಕಾಳೇರ ಮಾತನಾಡಿ, “ಮಹಿಳೆಯರ ಆರ್ಥಿಕ, ಸಾಮಾಜಿಕ ಸಬಲೀಕರಣದ ಸರ್ವತೋಮುಖ ಬೆಳವಣಿಗೆ ಅವಕಾಶಗಳನ್ನು ನೀಡಲು ಈ ವೇದಿಕೆ ಯಾವಾಗಲು ಸಿದ್ದವಾಗಿರುತ್ತದೆ” ಎಂದು ಹೇಳಿದರು.

Advertisements

ಜನವೇದಿಕೆ ಮುಖಂಡ ಪಕ್ಕಿರಪ್ಪ ಬಾಳೂರ ಮಾತನಾಡಿ, “ಹಳ್ಳಿಗಳಲ್ಲಿ ಇರುವ ನಮ್ಮನ್ನು ಗುರುತಿಸಿ ನಾಯಕತ್ವ ಬೆಳೆಸಿ ಇಂತಹ ಕಾರ್ಯಕ್ರಮಗಳಲ್ಲಿ ಸನ್ಮಾನಿಸುತ್ತಿರುವುದು ಸಂತೋಷವಾಗುತ್ತದೆ. ಸಮುದಾಯದಲ್ಲಿರುವ ನೂರಾರು ವೃದ್ದರು, ಬಡವರು, ವಿಧವೆಯರನ್ನು ಗುರುತಿಸಿ ಅವರಿಗೆ ಸಿಗಬೇಕಾದ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿ ಅವುಗಳನ್ನು ದೊರಕಿಸಿ ಕೊಡುವಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಸಂಸ್ಥೆಯ ರಜತ ಮಹೋತ್ಸವದ ಪ್ರಯುಕ್ತ 25 ವರ್ಷಗಳಿಂದ ಮಹಿಳೆಯರ ಸಬಲೀಕರಣದಲ್ಲಿ ತೊಡಗಿರುವ ಹಿರೇಕಣಗಿ ವಲಯದ ಮಹಿಳಾ ಸ್ವಸಹಾಯ ಸಂಘಗಳ ಲಕ್ಷ್ಮವ್ವ ಬೈಲವಾಡ, ಪವಿತ್ರಾ ಬೈಲವಾಡ, ಲಕ್ಷ್ಮವ್ವ ಓಣೀಕರಿ, ಗಂಗವ್ವ ಕಾಳೇರ ಮತ್ತು ಜನವೇದಿಕೆ ಮುಖಂಡ ಫಕ್ಕಿರಪ್ಪ ಬಾಳೂರ, ಪಾಲಾಕ್ಷಯ್ಯ ಹಿರೇಮಠ, ರಾಮಚಂದ್ರ ಶಿಡ್ಲಾಪುರ, ಪದ್ಮಾವತಿ ಕೊಳ್ಳೂರ ಹಾಗೂ ಲಕ್ಷ್ಮವ್ವ ಲಮಾಣಿ ಎಂಬುವವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ರಷ್ಯಾದ ಮಹಾ ಕ್ರಾಂತಿಗೆ 106 ವರ್ಷ

ಸಭೆಯಲ್ಲಿ ಉಪಾಧ್ಯಕ್ಷೆ ಕಮಲಾಕ್ಷಿ ಬೆಳಗಲಿ, ಖಜಾಂಚಿ ಚಂಪಾ ಕರ್ಜಗಿ, ಸಮುದಾಯ ಸಂಘಟನೆ ಸಂಯೋಜಕ ಕಲ್ಲಪ್ಪ ನಾಯ್ಕರ, ಮಹಿಳಾ ಸಬಲೀಕರಣದ ಸಂಯೋಜಕ ಡಿಗ್ಗಪ್ಪ ಲಮಾಣಿ, ಸಿಬ್ಬಂದಿ ರೂಪಾ ರಜಪೂತ, ಶೀಲಾ ಮ್ಯಾಗಳಮನಿ ಮತ್ತು ಒಕ್ಕೂಟದ ಸರ್ವ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X