ಬೆಳಗಾವಿ ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆ: ಸಭಾಧ್ಯಕ್ಷ ಯು ಟಿ ಖಾದರ್‌

Date:

Advertisements
  • ಸಭಾಧ್ಯಕ್ಷ ಯು ಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಭೇಟಿ
  • ‘ವಿಧಾನಸಭೆ ಸಭಾಂಗಣದಲ್ಲಿ ದೊಡ್ಡ ಪರದೆಯ ಟಿವಿ ಅಳವಡಿಸಿ’

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ನಲ್ಲಿ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿವೇಶನದ ಪೂರ್ವಸಿದ್ಧತೆಯನ್ನು ಮಂಗಳವಾರ ಪರಿಶೀಲಿಸಿದರು.

ಸುವರ್ಣ ವಿಧಾನಸೌಧವನ್ನು ಬೆಂಗಳೂರಿನ ವಿಧಾನಸೌಧದ ಮಾದರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆರಂಭದಲ್ಲಿ ಸುವರ್ಣ ವಿಧಾನಸೌಧ ಕಟ್ಟಡವನ್ನು ವೀಕ್ಷಿಸಿದ ಸಭಾಧ್ಯಕ್ಷ ಯು ಟಿ ಖಾದರ್ ಅವರು, ಪಶ್ಚಿಮ ಪ್ರವೇಶ ದ್ವಾರದ ಕೆಲವು ಕಡೆಗಳಲ್ಲಿ ಬಣ್ಣ ಮಾಸಿರುವುದು ಹಾಗೂ ಕಲೆಗಳಿರುವುದನ್ನು ಸರಿಪಡಿಸಲು ಸೂಚಿಸಿದರಲ್ಲದೇ ವರ್ಷವಿಡೀ ಸುವರ್ಣಸೌಧದ ಉತ್ತಮ ನಿರ್ವಹಣೆಗೆ ಸಂಬಂಧಿಸಿದಂತೆ‌ ಶಾಶ್ವತ ಯೋಜನೆ ರೂಪಿಸಲಾಗುವುದು ಎಂದರು.

Advertisements

“ಧ್ವನಿವರ್ಧಕ, ಸ್ವಚ್ಛತೆ, ಆಸನ ವ್ಯವಸ್ಥೆ, ವಿದ್ಯುಚ್ಛಕ್ತಿ, ಅಂತರ್ಜಾಲ ಸಂಪರ್ಕ, ಟಿವಿ ಪರದೆ, ಕಂಪ್ಯೂಟರ್ ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ವಿಧಾನಸಭೆ ಸಭಾಂಗಣದಲ್ಲಿ ದೊಡ್ಡ ಪರದೆಯ ಟಿವಿ ಅಳವಡಿಸಬೇಕು. ಸಭಾಧ್ಯಕ್ಷರ ಕುರ್ಚಿ ಎದುರು ಎಲ್ಲ ಶಾಸಕರ ಹೆಸರು ಹಾಗೂ ಆಸನ ಸಂಖ್ಯೆಯ ಮಾಹಿತಿಯನ್ನು ಪ್ರದರ್ಶಿಸುವ ಚಾರ್ಟ್ ಅಳವಡಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜಕೀಯಕ್ಕಾಗಿ ಬಿಜೆಪಿಯಿಂದ ಬರ ಅಧ್ಯಯನ: ಸಿಎಂ ಸಿದ್ದರಾಮಯ್ಯ ಕಿಡಿ

ನಂತರ ಸೆಂಟ್ರಲ್ ಹಾಲ್, ಪರಿಷತ್ ಸಭಾಂಗಣ, ಸಭಾಪತಿ ಕೊಠಡಿ. ವಿರೋಧ ಪಕ್ಷದ ಮೊಗಸಾಲೆ, ಮಂತ್ರಿಗಳ ಮೊಗಸಾಲೆ, ಕ್ಯಾಬಿನೆಟ್ ಹಾಲ್, ಆಡಿಟೋರಿಯಂ ಮತ್ತಿತರ ಸ್ಥಳಗಳನ್ನು ಪರಿಶೀಲಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತರಾದ ಎಸ್.ಎನ್.ಸಿದ್ದರಾಮಪ್ಪ, ಜಿಲ್ಲಾ ಪಂಚಾಯತ್ ಮುಖ್ಯ‌ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸೊಬರದ ಹಾಗೂ ಇತರೆ ಅಧಿಕಾರಿಗಳು, ಸುವರ್ಣ ವಿಧಾನಸೌಧದ ನಿರ್ವಹಣೆಯ ಕುರಿತು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X