ಲೋಕಾಯುಕ್ತ ಬಿ.ಎಸ್.ಪಾಟೀಲ್‌ ಪದಚ್ಯುತಿಗೊಳಿಸುವಂತೆ ಸ್ಪೀಕರ್‌ಗೆ ‘ನೈಜ ಹೋರಾಟಗಾರರ ವೇದಿಕೆ’ ಮನವಿ

Date:

Advertisements

ಕರ್ನಾಟಕ ರಾಜ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ ಸಂಘಟನೆಯು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದೆ.

‘ನೈಜ ಹೋರಾಟಗಾರರ ವೇದಿಕೆ’ಯ ಮುಖಂಡ ಎಚ್.ಎಂ ವೆಂಕಟೇಶ್ ಅವರ ನೇತೃತದ್ವ ನಿಯೋಗವು, ಸ್ಪೀಕರ್ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿತು.

ಮನವಿಯಲ್ಲಿ, ‘ಪ್ರಸ್ತುತ ಲೋಕಾಯುಕ್ತ ನ್ಯಾಯಮೂರ್ತಿಯಾಗಿರುವ ಬಿ.ಎಸ್. ಪಾಟೀಲ್ ಮತ್ತು ಅವರ ಕುಟುಂಬದ ಮೇಲೆ ಗಂಭೀರವಾದ ಆರೋಪ, ಆಪಾದನೆಗಳಿದ್ದರೂ ಸಹಿತ ಅವರ ಮೇಲೆ ಎಫ್ಐಆರ್ ಮಾಡದಂತೆ ಲೋಕಾಯುಕ್ತರು ಪೊಲೀಸರ ಮೇಲೆ ಪ್ರಭಾವ ಬೀರಿದ್ದಾರೆ” ಎಂದು ‘ನೈಜ ಹೋರಾಟಗಾರರ ವೇದಿಕೆ’ ಆರೋಪಿಸಿದೆ.

Advertisements

horata vedike

‘ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಬೇಕು. ಅವರನ್ನು ಲೋಕಾಯುಕ್ತ ಸ್ಥಾನದಿಂದ ಪದಚ್ಯುತಿಗೊಳಿಸಬೇಕು. ಅವರ ಸ್ಥಾನಕ್ಕೆ ಪ್ರಾಮಾಣಿಕ ನ್ಯಾಯಮೂರ್ತಿ ಒಬ್ಬರನ್ನು ಲೋಕಾಯುಕ್ತರನ್ನಾಗಿ ನೇಮಿಸಿ ಲೋಕಾಯುಕ್ತ ಸಂಸ್ಥೆಯ ಘನತೆಯನ್ನು ಎತ್ತಿ ಹಿಡಿಯಬೇಕು’ ಎಂದು ಯು.ಟಿ. ಖಾದರ್ ಅವರನ್ನು ‘ನೈಜ ಹೋರಾಟಗಾರರ ವೇದಿಕೆ’ ಒತ್ತಾಯಿಸಿದೆ.

33 1

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X