ಕಾಡಾನೆ ದಾಳಿ | ಮೃತ ಮಹಿಳೆ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

Date:

Advertisements
  • ಕಾಡಾನೆ ಹಾವಳಿ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುರ್ತು ಸಭೆ
  • ಕಾಡಾನೆ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸೂಚನೆ 

ಕಾಡಾನೆಗಳನ್ನು ವಾಪಸ್ ಕಾಡಿಗೆ ಕಳುಹಿಸಿ, ಹಾವಳಿ ತಪ್ಪಿಸುವ ಸಂಬಂಧ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು ಮುಖ್ಯಮಂತ್ರಿ ಸಿದ್ದರಾಮಯ್ಯ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಬುಧವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ 29 ವರ್ಷ ವಯಸ್ಸಿನ ಶ್ರಮಿಕ ಮಹಿಳೆ ಮೀನಾ ಅವರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ತಕ್ಷಣ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದರು.

Advertisements

ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ.

“ಮೃತ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಜತೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕಾಡಾನೆ ಹಾವಳಿ ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಲು ಸಚಿವ ಖಂಡ್ರೆ ಸೂಚನೆ

“ಅರಣ್ಯ ಸಚಿವರೂ ಇಲ್ಲಿಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳುತ್ತಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜತೆ ಚರ್ಚಿಸಿದ್ದೇನೆ” ಎಂದು ಮುಖ್ಯಮಂತ್ರಿಗಳು ಇದೇ ವೇಳೆ ತಿಳಿಸಿದ್ದಾರೆ.

“ಕಾಡಾನೆಗಳಿಗೆ ಗುಂಡು ಹೊಡೆದು ಕೊಲ್ಲಬೇಕು ಎನ್ನುವ ಸ್ಥಳೀಯರ ಮತ್ತು ಪ್ರತಿಭಟನಾಕಾರರ ಒತ್ತಾಯದ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಆ ಹಂತಕ್ಕೆ ಯೋಚನೆ ಮಾಡುವುದು ಬೇಡ. ಇತರೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X