ಶೂ ವಿವಾದ | ವೈಯಕ್ತಿಕ ಸಹಾಯಕ್ಕೆ ಬಣ್ಣ ಕಟ್ಟುವುದು ಸರಿಯಲ್ಲ: ಎಚ್‌ ಸಿ ಮಹದೇವಪ್ಪ

Date:

Advertisements
  • ಅಂಗರಕ್ಷಕರು ಮಂತ್ರಿಗೆ ಶೂ ಹಾಕಿದ್ದಾರೆಂಬ ವಿವಾದ
  • ‘ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ’

ಧಾರವಾಡಕ್ಕೆ ಭೇಟಿ ನೀಡಿದ ವೇಳೆ ಅಂಗರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪ, ಇರಾದೆ ಇರಲಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “Hip joint knee ತೊಂದರೆಗೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ” ಎಂದು ಹೇಳಿದ್ದಾರೆ.

“ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿ ಬಳಿ ಕಾಲಿನ ಸಮಸ್ಯೆಯ ಹಿನ್ನೆಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದ್ದು ಅನಗತ್ಯವಾಗಿ ಇದಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ

“ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಈ ಬಗ್ಗೆ ಸ್ವಯಂ ವಿವರಣೆ ಕೊಡುವುದಾಗಲೀ ಇಲ್ಲವೇ ಸ್ವಮರುಕ ಪಡುವುದಾಗಲೀ ನಾನು ಮಾಡುವುದಿಲ್ಲ. ಮೂಲತಃ ಸಂವಿಧಾನದ ಆಶಯಗಳ ಪ್ರಕಾರವೇ ಬದುಕುವ ನನಗೆ ಸಮಾನತೆ, ವ್ಯಕ್ತಿ ಗೌರವ, ಪ್ರೀತಿ ವಿಶ್ವಾಸ ಹೊರತು ಪಡಿಸಿ ಇತರೆ ಸಂಗತಿಗಳಲ್ಲಿ ಆಸಕ್ತಿ ಇಲ್ಲ” ಎಂದು ಹೇಳಿದ್ದಾರೆ.

“ದೈಹಿಕ ತೊಂದರೆಗಾಗಿ ಪಡೆದ ಸಹಾಯವನ್ನು ಸಂಕುಚಿತ ಮನಸ್ಸಿನಿಂದ ನೋಡಬಾರದೆಂದು ನಮ್ಮ ಮಾಧ್ಯಮ ಮಿತ್ರರಲ್ಲಿ ನಾನು ಮನವಿ ಮಾಡುತ್ತೇನೆ. ಇನ್ನು ಅಗತ್ಯ ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ನನ್ನ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X