ಬೀದರ್‌ | ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಬರ ಘೋಷಣೆ: ಸಚಿವ ಈಶ್ವರ ಖಂಡ್ರೆ

Date:

Advertisements

ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೆ ಮೂರು ತಾಲೂಕುಗಳಿಗೆ ಬರ ಘೋಷಿಸಲಾಗಿತ್ತು. ಆದರೆ ಉಳಿದ ತಾಲೂಕುಗಳಲ್ಲಿ ಅದೇ ಪರಿಸ್ಥಿತಿ ಇರುವುದರಿಂದ ಜಿಲ್ಲೆಯ ಎಲ್ಲ ಎಂಟು ತಾಲೂಕುಗಳನ್ನು ಸಹ ಬರಪೀಡಿತವೆಂದು ಘೋಷಣೆ ಮಾಡಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಬುಧುವಾರ ಜಿಲ್ಲಾ ಪಂಚಾಯತಿಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. “ಬರ ಘೋಷಿಸಿರುವ ತಾಲೂಕುಗಳ ರೈತರಿಗೆ ಪರಿಹಾರ ಒದಗಿಸಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಎಲ್ಲಾ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಕ್ರಮ ವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗುವುದು, ಆಯಾ ತಾಲ್ಲೂಕಿನಲ್ಲಿರುವ ಹಾನಿಯ ಕುರಿತು ಪ್ರಸ್ತಾವನೆ ಸಲ್ಲಿಸಿದ್ದಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು. ಅದೇ ರೀತಿ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಜಿಲ್ಲೆಯಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದ್ದರು ಕೂಡ ವಿಮಾ ಕಂಪನಿಯವರು ರೈತರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಒದಗಿಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಚ್ಚು ಮುತುವರ್ಜಿ ವಹಿಸಿ ಜಿಲ್ಲೆಯ ರೈತರಿಗೆ ಬೆಳೆ ವಿಮಾ ಪರಿಹಾರ ಒದಗಿಸಲು ಕ್ರಮಕೈಗೊಳ್ಳಬೇಕು ಹಾಗೂ ವಿಮೆ ಪರಿಹಾರಕ್ಕಾಗಿ ಮಾಡಲಾಗುವ ಕ್ರಾಪ್ ಕಂಟಿಂಗ್ ಎಕ್ಸಪೆರಿಮೆಂಟ್ ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಕಾರಂಜಾ ಜಲಾಶಯದಿಂದ ಬಿಡುಗಡೆಯಾಗುವ ನೀರು ಜೋಳದಾಪಕ ಹಾಗೂ ಡೋಂಗರಗಾಂವ ಬಳಿ ಪೋಲಾಗುತ್ತಿರುವ ಬಗ್ಗೆ ದೂರು ಬರುತ್ತಿದ್ದು, ಇದರಿಂದ ಉಳಿದ ರೈತರಿಗೆ ಸಮಸ್ಯೆಯಾಗುತ್ತಿದೆ ಈ ಹಿನ್ನೆಲೆಯಲ್ಲಿ ಪೋಲಾಗುತ್ತಿರುವ ನೀರಿನ ಸಮಸ್ಯೆಯನ್ನು ಕೂಡಲೆ ಬಗೆಹರಿಸಿ ಬರುವ ಒಂದು ವಾರದೊಳಗೆ 131 ಕಿ.ಮೀ. ವರೆಗೆ ನೀರು ಹರಿಸಲು ಕ್ರಮ ವಹಿಸಬೇಕು” ಎಂದು ಕಾರಂಜಾ ಜಲಾಶಯದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿ ಮೆನು ಪ್ರಕಾರ ಊಟ ಒದಗಿಸುತ್ತಿಲ್ಲವೆಂದು ವಿದ್ಯಾರ್ಥಿಗಳಿಂದ ದೂರು ಬರುತ್ತಿರುವುದರಿಂದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಈ ಸಮಸ್ಯೆಗಳನ್ನು ಮರುಕಳಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿಯನ್ನು ರೈತರಿಗೆ ತಿಳಿಯಲು ಹೆಚ್ಚಿನ ರೀತಿಯಲ್ಲಿ ಪ್ರಚಾರವನ್ನು ನೀಡುವುದರ ಜೊತೆಗೆ ಹನಿ ನೀರಾವರಿ ಸೇರಿದಂತೆ ಇತರೆ ಯೋಜನೆಗಳನ್ನು ಜಿಲ್ಲೆಯಲ್ಲಿ ಎಷ್ಟು ರೈತರು ಅವುಗಳ ಲಾಭ ಪಡೆದಿದ್ದಾರೆ ಎನ್ನುವ ಕುರಿತು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಿಂದ ಸಚಿವರು ಮಾಹಿತಿ ಪಡೆದರು.

ಕೆಕೆಆರ್‌ಡಿಬಿ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯಲಿ:

“ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಜನರು ಲಾಭ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಎಷ್ಟು ಜನರು ಇನ್ನು ನೋಂದಣಿ ಮಾಡದೆ ಬಾಕಿ ಉಳಿದಿದ್ದಾರೆ ಎಲ್ಲರಿಗೂ ಇದರ ಲಾಭ ಸಿಗುವಂತಾಗಬೇಕು. ಪೂರಕ ದಾಖಲೆಗಳನ್ನು ಸಲ್ಲಿಸದೆ ಇರುವ ಜನರಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಈ ಕುರಿತು ಅವರಿಗೆ ಮಾಹಿತಿ ನೀಡಬೇಕು. ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಬಿಟ್ಟು ಹೊಗದಂತೆ ನೋಡಿಕೊಳ್ಳಬೇಕು. ಕೆಕೆಆರ್‌ಡಿಬಿಯ ಎಲ್ಲಾ ಕಾಮಗಾರಿಗಳು ವೇಗದ ಗತಿಯಲ್ಲಿ ಮತ್ತು ಗುಣಮಟ್ಟದಿಂದಾಗಬೇಕು. ಜಿಲ್ಲೆಯಲ್ಲಿರುವ ಕೆಲಸ ಮತ್ತು ಕಾಮಗಾರಿಗಳು ಕಾಲ ಮಿತಿಯಲ್ಲಿ ಮುಗಿಸಬೇಕು ಹಾಗೂ ಹಿಂದೆ ಕಳಪೆ ಕಾಮಗಾರಿಯಾಗಿವೆ ಎಂಬ ದೂರುಗಳಿವೆ ಅವುಗಳ ತನಿಖೆ ಮಾಡಿದ ಮೇಲೆಯೇ ಅವರಿಗೆ ಅನುದಾನ ಬಿಡುಗಡೆ ಮಾಡಬೇಕು” ಎಂದು ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.

“ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆಯ ಕುರಿತು ಹಲವಾರು ದೂರುಗಳು ಜನರಿಂದ ಬರುತ್ತಿವೆ. ನಿರಂತರ ವಿದ್ಯುತ್ ಕೊಡುತ್ತಿಲ್ಲ, ಟ್ರಾನ್ಸಫಾರಂ ಸುಟ್ಟರು ಬೇಗನೆ ರೀಪ್ಲೆಸ್ ಮಾಡುತ್ತಿಲ್ಲ ಎಂಬ ದೂರುಗಳು ಬರದಂತೆ ನೋಡಿಕೊಳ್ಳಬೇಕು. ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ಸ್ಟೇಷನ್ ಗಳನ್ನು ಹೆಚ್ಚಿಸಬೇಕೆಂದು” ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿವಿಧ ಬೇಡಿಕೆ ಈಡೇರಿಸುವಂತೆ ಸಫಾಯಿ ಕರ್ಮಚಾರಿ ಸಮಾಜ ಆಗ್ರಹ

ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯರುಗಳಾದ ಅರವಿಂದಕುಮಾರ ಅರಳಿ, ಡಾ. ಚಂದ್ರಶೇಖರ ಪಾಟೀಲ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸೋದ್ದಿನ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಂ ಎಂ., ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X