ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ವೇಳೆ ಕಳ್ಳನೊಬ್ಬ 10 ಸಾವಿರ ಹಣ ಮತ್ತು ವಜ್ರದ ಕಿವಿಯೋಲೆಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗಿಯಾಗಿದ್ದರು.
ಬೆಂಗಳೂರಿನ ರಾಡಿಸನ್ ಬ್ಲೂ ಎಂಬ ಖಾಸಗಿ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.
ಅಜಿತಾ ಎಂಬುವವರ ಹಣ ಮತ್ತು ವಜ್ರದ ಕಿವಿಯೋಲೆಗಳು ಕಳ್ಳತನವಾಗಿವೆ ಎಂದು ತಿಳಿದುಬಂದಿದೆ. ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಅಜಿತಾ ಅವರು ಫೋಟೋ ತೆಗೆಸಿಕೊಳ್ಳಲು ಹೋದಾಗ ಕಳ್ಳನೊಬ್ಬ ಅವರ ಪರ್ಸ್ ಕದ್ದು ಪರಾರಿಯಾಗಿದ್ದಾನೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೇಂಟ್ ಮಿಕ್ಸರ್‌ಗೆ ಮಹಿಳೆ ಕೂದಲು ಸಿಲುಕಿ ಸಾವು
ಇನ್ನು ಕಳ್ಳ ಅಜಿತಾ ಅವರ ಪರ್ಸ್ ಕದಿಯುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಟ್ವೀಟರ್ನಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.