ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಿಎಂ ಸಿದ್ದರಾಮಯ್ಯ

Date:

Advertisements
  • ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ: ಸಿಎಂ
  • ಶೈಕ್ಷಣಿಕ ಧನಸಹಾಯ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

Advertisements

“ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

“9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು. ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ” ಎಂದರು.

“ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು” ಎಂದು ಏಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಆಹಾರ ಸಚಿವರಾದ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X