ಕಾರಿನ ಕನ್ನಡಿ ಒಡೆದು ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಂಚಾರ ಪೊಲೀಸರು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಕನ್ನಡಿಯನ್ನು ಒಡೆದು ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬೆಂಗಳೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.

ನಗರದಲ್ಲಿ ಉಂಟಾಗುವ ಸಂಚಾರ ಉಲ್ಲಂಘನೆಗಳನ್ನು ನಿಯಮಿತವಾಗಿ ಪೋಸ್ಟ್ ಮಾಡುವ @3rdEyeDude ಎಂಬ ಟ್ವಿಟರ್‌ ಖಾತೆ ಬಳಕೆದಾರರು, ನವೆಂಬರ್ 5 ರಂದು ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಸಂಜೆ 5.07 ರ ಸುಮಾರಿಗೆ ಡ್ಯಾಶ್‌ಕ್ಯಾಮ್‌ನಿಂದ ಸೆರೆಹಿಡಿಯಲಾದ ವೀಡಿಯೊವನ್ನು ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಕಾರಿನ ಕನ್ನಡಿ ಒಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

Advertisements

ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಕೆಂಪು ಹ್ಯುಂಡೈ ಕಾರಿನ ಚಾಲಕ ತನ್ನ ಪಾಡಿಗೆ ತಾನು ಕಾರು ಚಾಲನೆ ಮಾಡಿಕೊಂಡು ಮುಂದೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ತ್ರಿಬಲ್ ರೈಡ್‌ನ ಬೈಕ್‌ನಲ್ಲಿ ಓರ್ವ ಯುವಕ ಕಾರಿನ ಎಡ ಕನ್ನಡಿಯನ್ನು ತಿರುಗಿಸಿ, ಮಿರರ್‌ಗೆ ಹೊಡೆದಿದ್ದಾನೆ. ಈ ಮೂರು ಕಿಡಿಗೇಡಿಗಳು ಪುಂಡಾಟ ಮೆರೆದಿರುವ ದೃಶ್ಯ ಮತ್ತೊಂದು ಕಾರಿನ್ ಡ್ಯಾಶ್‌ಕ್ಯಾಮರಾದಲ್ಲಿ ಸೆರೆಯಾಗಿದೆ.

“19 ಸಾವಿರ ದಂಡ ಬಾಕಿಯಿರುವ ಟ್ರಿಪಲ್ ರೈಡಿಂಗ್ ದ್ವಿಚಕ್ರ ವಾಹನದಲ್ಲಿರುವ ವ್ಯಕ್ತಿಯೋರ್ವ ಕಾರಿನ ಕನ್ನಡಿಯನ್ನು ಒಡೆದಿದ್ದಾನೆ. ಈ ಕೃತ್ಯ ಎಸಗಲು ಅವರನ್ನು ಪ್ರಚೋದಿಸಿದ್ದು ಏನು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಇದು ಕಾನೂನುಬಾಹಿರವಾಗಿದೆ” ಎಂದು ಬಳಕೆದಾರರು ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಾರ್ ಮಿರರ್ ಹೊಡೆದ ಕೃತ್ಯ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ. ವಿಡಿಯೋ ಪೋಸ್ಟ್ ಮಾಡಿದ ಸುಮಾರು ಎರಡು ಗಂಟೆಗಳ ನಂತರ ಸ್ಕೂಟರ್ (ಕೆಎ 05 ಎಲ್ಎಲ್ 6204) ಅನ್ನು ಸಂಚಾರ ಪೊಲೀಸರು ಪತ್ತೆಹಚ್ಚಿದ್ದಾರೆ.

“ಸ್ಕೂಟರ್ ಮಾಲೀಕರನ್ನು ಜಯನಗರದಲ್ಲಿ ವಾಸವಾಗಿರುವ ಯೆಲ್ಲಮ್ಮ ಎಂದು ಗುರುತಿಸಲಾಗಿದೆ. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುವ ಆಕೆಯ 21 ವರ್ಷದ ಮಗ ರೋಹಿತ್ ಕನ್ನಡಿ ಒಡೆದ ವ್ಯಕ್ತಿ ಎಂದು ಗುರುತಿಸಲಾಗಿದೆ” ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

“ಪ್ರಕರಣವು ಇನ್ನೂ ತನಿಖೆಯಲ್ಲಿದೆ. ಆರೋಪಿ ತಾನು ಕೃತ್ಯ ಎಸಗಿದಾಗ ಕುಡಿದಿದ್ದಾಗಿ ಹೇಳಿಕೊಂಡಿದ್ದಾನೆ. ಸ್ಕೂಟರ್ ವಿರುದ್ಧ ಸಂಚಾರ ನಿಯಮ ಉಲ್ಲಂಘನೆಯ 39 ಪ್ರಕರಣಗಳು ದಾಖಲಾಗಿದ್ದು, ₹19,500 ದಂಡವಿದೆ. ಇದೀಗ ಈ ವೀಡಿಯೋವನ್ನು ಆಧರಿಸಿ ಎರಡು ಹೊಸ ನಿಯಮಗಳು ಸೇರಿದಂತೆ 41 ಸಂಚಾರ ಉಲ್ಲಂಘನೆಗಳಿಗಾಗಿ ಒಟ್ಟು ₹21,500 ಪಾವತಿಸಬೇಕು. ಆರೋಪಿಗಳ ವಿರುದ್ಧ ಐಪಿಸಿ ಮತ್ತು ಮೋಟಾರು ವಾಹನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಈ ಪ್ರಕರಣವನ್ನು ಕಾನೂನು ಸುವ್ಯವಸ್ಥೆ ಪೊಲೀಸರಿಗೆ ಹಸ್ತಾಂತರಿಸಿದ್ದೇವೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಐಸಿಎಂಆರ್‌ಗೆ ಆಮ್ ಆದ್ಮಿ ಪಕ್ಷ ದೂರು

ರೋಹಿತ್ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನಿಬ್ಬರು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Download Eedina App Android / iOS

X