ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಮತ್ತು ಇನ್ನಿತರೆ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ಸ್ಥಳಕ್ಕೆ ಭೇಟಿ ನೀಡಿ ಮುಖ್ಯೋಪಾಧ್ಯಾಯರಿಗೆ ವಿದ್ಯಾರ್ಥಿಗಳ ಸಮಸ್ಯೆ ಈಡೇರಿಸುವಂತೆ ಒತ್ತಾಯಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ, ಚಂದ್ರು ರಾಠೋಡ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 430ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ಇಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ ಮತ್ತೆ ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ, ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಬಿಸಿಯೂಟ ಈತರಹ ಮಧ್ಯಾಹ್ನದ ಊಟವನ್ನು ಕೊಡಬೇಕು ಎಂದು ಸರ್ಕಾರದ ಆದೇಶವಿದ್ದರೂ, ಇಲ್ಲಿನ ವಿದ್ಯಾರ್ಥಿಗಳಿಗೆ ಸುಮಾರು ಒಂದು ತಿಂಗಳು ಕೊಟ್ಟಿಲ್ಲ.
ಅದೇ ರೀತಿಯಲ್ಲಿ ಇಲ್ಲಿನ ಮಕ್ಕಳು ಶಾಲೆಯಲ್ಲಿ ಶಿಕ್ಷಣ ಪಡೆಯುವುದರ ಬದಲಾಗಿ ಅಲ್ಲಿನ ಶೌಚಾಲಯ ಹಾಗೂ ಬೇರೆ ಬೇರೆ ರೀತಿಯ ಕೆಲಸಗಳನ್ನು ಸ್ವಚ್ಹ ಮಾಡುಲು ಹಚ್ಚಿದ್ದಾರೆ. ಇದು ಸರಿಯಾದ ವ್ಯವಸ್ಥೆಯಲ್ಲ. ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಕ್ಷೇತ್ರಸಮನ್ವಯ ಅಧಿಕಾರಿಗಳು, ಆದಷ್ಟು ಬೇಗ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಿ. ಅದರ ಜೊತೆ ಶಾಲೆಯ ಮುಖ್ಯ ಶಿಕ್ಷಕಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಎಲ್ಲಿ ತಿಳಿಸಲಾಗಿದೆ ಎಂದರು.
ಈ ಸಂಬಂಧ ʼಈ ದಿನʼಕ್ಕೆ ಉತ್ತರಿಸಿದ ಸಮನ್ವಯ ಅಧಿಕಾರಿ ಎಂ.ಎ. ಫನಿಬಂಧ, ಇವತ್ತೇ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಕೊಡುತ್ತೇವೆ. ಘಟನೆಗೆ ಸಂಬಂಧಿಸಿದಂತೆ ಮೂಖ್ಯೋಪಾಧ್ಯಯವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.