ರಾಯಚೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಒದಗಿಸಬೇಕೆಂದು ರಾಯಚೂರು ಹಮಾಲಿ ಶ್ರಮಿಕರ ಕ್ಷೇಮಾಭಿವೃದ್ದಿ ಸಂಘ ಒತ್ತಾಯಿಸಿದೆ. ಎಪಿಎಂಸಿ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ
“ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹಮಾಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಶುದ್ದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ” ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.
“ರಾಜೇಂದ್ರ ಗಂಜ್‌ನಲ್ಲಿ ಸಿಕ್ಕಾಪಟ್ಟೆ ಧೂಳು ಇರುವುದರಿಂದ ಕಾರ್ಮಿಕರಿಗೆ ತೊಂದರೆಯಾಗಿದೆ. ಅನೇಕ ರೋಗ ರುಜಿನಗಳಿಗೆ ಕಾರ್ಮಿಕರು ತುತ್ತಾಗುತ್ತಿದ್ದಾರೆ. ಗಂಜ್ ಆವರಣದಲ್ಲಿಯೇ ಇಎಸ್‌ಐ ಆಸ್ಪತ್ರೆ ಸ್ಥಾಪಿಸಬೇಕು” ಎಂದು ಮನವಿ ಮಾಡಿದ್ದಾರೆ.
ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ, ಉಪಾಧ್ಯಕ್ಷ ವಿ.ಲಕ್ಷಿö್ಮÃರೆಡ್ಡಿ, ಕಾರ್ಯದರ್ಶಿ ಹನುಮಂತಪ್ಪ, ಜಂಟಿ ಕಾರ್ಯದರ್ಶಿ ರಾಮರಾವ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.
ವರದಿ : ಹಫೀಜುಲ್ಲ