ಬೆಂಗಳೂರು | ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 25 ಲಕ್ಷ ಅಮೆರಿಕನ್ ಡಾಲರ್; ದೆಹಲಿಯತ್ತ ಪೊಲೀಸರು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ವಿಶ್ವಸಂಸ್ಥೆಯ ಮುದ್ರೆ ಹೊಂದಿರುವ ಪತ್ರದ ಜತೆಗೆ 25 ಲಕ್ಷ ಅಮೆರಿಕನ್ ಡಾಲರ್ ಸಿಕ್ಕಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವು ಸಿಕ್ಕಿದ್ದು, ಸಿಕ್ಕಿರುವ ಹಣ ನಕಲಿನಾ ಎಂಬ ಪ್ರಶ್ನೆ ಮೂಡಿದೆ.

ನಾಗವಾರ ರೈಲು ಹಳಿ ಪಕ್ಕದ ಪೊದೆಯಲ್ಲಿ ಡಾಲರ್ ಮೌಲ್ಯದ ಕರೆನ್ಸಿಯ ಕಟ್ಟು ಇದ್ದ ಪ್ಲಾಸ್ಟಿಕ್ ಚೀಲವನ್ನು ಚಿಂದಿ ಆಯುವ ವ್ಯಕ್ತಿಗೆ  ಸಿಕ್ಕಿದೆ. ಈತ ಈ ಬಗ್ಗೆ ತನ್ನ ಮಾಲೀಕನಿಗೆ ಮಾಹಿತಿ ನೀಡಿದ್ದಾನೆ. ಈ ನಡುವೆ ವಿಚಾರ ತಿಳಿದ ಮತ್ತೋರ್ವ ವ್ಯಕ್ತಿಯಿಂದ ಕಮಿಷನರ್‌ಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ನಂತರ ಈ ಬಗ್ಗೆ ಹೆಬ್ಬಾಳ ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರು ಮಾಹಿತಿ ನೀಡಿದ ಬೆನ್ನಲ್ಲೆ ಈ ಕರೆನ್ಸಿಯ ಅಸಲಿ ಕಹಾನಿಯ ಬಗ್ಗೆ ತಿಳಿಯಲು ಹೆಬ್ಬಾಳ ಪೊಲೀಸರು ದೆಹಲಿಗೆ ತೆರಳಿದ್ದಾರೆ.

Advertisements

ಚಿಂದಿ ಆಯುವ ವ್ಯಕ್ತಿಗೆ ದೊರೆತ ಅಮೆರಿಕನ್ ಡಾಲರ್‌ ನಕಲಿನಾ ಎಂಬ ಪ್ರಶ್ನೆ ಮೂಡಿದೆ. ಅನಾಮಿಕರು ಜೆರಾಕ್ಸ್‌ಗಳನ್ನು ಬಿಸಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಹೆಬ್ಬಾಳ ಪೊಲೀಸರು ಆರ್‌ಬಿಐಗೆ ಪತ್ರ ಬರೆದಿದ್ದಾರೆ. ಯುಎಸ್ ಕರೆನ್ಸಿ ಅಸಲಿ ಎಂದು ಆರ್​ಬಿಐ ಧೃಡಿಕರಿಸಿಲ್ಲ. ದೆಹಲಿಯ ಕಚೇರಿಯೊಂದರ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಹೆಬ್ಬಾಳ ಪೊಲೀಸರು ದೆಹಲಿಗೆ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಷ್ಟು ಮಳೆಗಾಲ ಬಂದು ಹೋದರು, ಸಿದ್ಧವಾಗದ ಬಿಬಿಎಂಪಿ: ತೆರಿಗೆ ಕಟ್ಟಿಯೂ ಜನರಿಗೆ ತಪ್ಪದ ಸಮಸ್ಯೆ

ಪೊಲೀಸರು ದೊರೆತ ಅಷ್ಟು ಕರೆನ್ಸಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ಡಾಲರ್‌​​ಗಳ ಜೊತೆ ವಿಶ್ವ ಸಂಸ್ಥೆಯ ಲೆಟರ್​ ಹೆಡ್​ನಲ್ಲಿರುವ ಪತ್ರ ಕೂಡ ಪತ್ತೆ ಆಗಿದೆ.

ಯುಎನ್​ನಿಂದ ಅಭಿವೃದ್ಧಿಗಾಗಿ ಹಣ ಕಳುಹಿಸಲಾಗಿದೆ. ಈ ಮಿಲಿಯನ್ಸ್ ಆಫ್ ಡಾಲರ್ಸ್ ಬಗ್ಗೆ ಗೌಪ್ಯತೆ ಕಾಪಾಡಿ ಎಂದು ಲೆಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X