ಹಾವೇರಿ | ಬ್ಯಾಂಕ್‌ ಗ್ರಾಹಕರಿಗೆ ವಂಚನೆ; ಸಹಾಯಕ ವ್ಯವಸ್ಥಾಪಕಿ ಬಂಧನ

Date:

Advertisements

ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ, ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಿಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್ ಬಂಧಿಸಿದ್ದಾರೆ.

ಬ್ಯಾಂಕಿನಲ್ಲಿ ನಡೆದಿರುವ ಅವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ ಅರ್ಚನಾ ಬೆಟಗೇರಿ, ದಿನಗೂಲಿ ಕೆಲಸಗಾರ ಶಾಂತಪ್ಪ ಎಲಗಚ್ಚ, ಬಿಜಿನೆಸ್ ಕರೆಸ್ಪಾಂಡೆಂಟ್ ಪ್ರವೀಣ್ ಚಿಕ್ಕಲಿಂಗದಹಳ್ಳಿ ಈ ಮೂವರ ವಿರುದ್ಧ, ಬ್ಯಾಂಕ್‌ನ ಶಾಖ ವ್ಯವಸ್ಥಾಪಕ ರವಿರಾಜ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಕುರುಬಗೊಂಡ ಶಾಖೆಯ ಯೂನಿಯನ್ ಬ್ಯಾಂಕ್ ನಲ್ಲಿ ಅರ್ಚನಾ ಬೆಟಿಗೇರಿ ಕಳೆದ ಎರಡುವರೆ ವರ್ಷಗಳಿಂದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ವಂತ ಲಾಭಕ್ಕಾಗಿ ಗ್ರಾಹಕರಿಗೆ ಸಂಬಂಧಿಸಿದ 1,12,78,920ರೂ. ನಗದು ಮತ್ತು 49,47,792ರೂ. ಮೌಲ್ಯದ ಚಿನ್ನಾಭರಣ ಸೇರಿ ಒಟ್ಟು 1.62ರೂ. ಕೋಟಿಯನ್ನ ವಂಚಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

Advertisements

ಬ್ಯಾಂಕಿಗೆ ಹಣ ಡಿಪಾಸಿಟ್ ಮಾಡಲು ಬಂದಿದ್ದ ಗ್ರಾಹಕರಿಂದ ಒಟ್ಟು 81,45,420 ಪಡೆದುಕೊಂಡು ನಗದು ರಸೀದಿಗಳಿಗೆ ಮತ್ತು ಭದ್ರತಾ ಪತ್ರಗಳಿಗೆ ಸಹಿ ಮಾಡಿ ಸೀಲು ಹಾಕಿ ಗ್ರಾಹಕರಿಗೆ ಕೊಟ್ಟಿದ್ದಾರೆ. ನಂತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡದೆ, ಅರ್ಚನಾ ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡಿರುವ ಆರೋಪ ಅವರ ಮೇಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X