ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಹೆಚ್ಚಾಗಿದ್ದು, ನಗರ ಪೊಲೀಸ್ ಇಲಾಖೆ ಇದನ್ನು ತಡೆಗಟ್ಟಲು ಹಲವು ಶಿಸ್ತು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಲಗ್ಗೆರಿಯ ರಾಜೀವ್ ಗಾಂಧಿ ನಗರದಲ್ಲಿ ಕುಡಿದ ಮತ್ತಿನಲ್ಲಿ ಕೆಲವು ಪುಂಡರು ಲಾಂಗ್ ಮತ್ತು ಮಚ್ಚಿನಿಂದ ಕೇವಲ ಐದು ನಿಮಿಷದಲ್ಲಿ 30ಕ್ಕೂ ಹೆಚ್ಚು ವಾಹನಗಳನ್ನು ಜಖಂ ಮಾಡಿದ ಘಟನೆ ನಡೆದಿದೆ.
“ಶುಕ್ರವಾರ ಬೆಳಗಿನ ಜಾವ ಸುಮಾರು 2-3 ಗಂಟೆಗೆ ಮೂವರು ಕೀಡಿಗೇಡಿಗಳು ಮಾಸ್ಕ್ ಧರಿಸಿ ಈ ಕೃತ್ಯ ಎಸಗಿದ್ದಾರೆ. ಮೂರು ರಸ್ತೆಗಳಲ್ಲಿ ನಿಲ್ಲಿಸಿದ್ದ ಸುಮಾರು 30ಕ್ಕೂ ಹೆಚ್ಚು ವಾಹನಗಳ ಮೇಲೆ ಲಾಂಗ್ ಮತ್ತು ಮಚ್ಚಿನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕೀಡಿಗೇಡಿಗಳ ಈ ದುಷ್ಕ್ರತ್ಯಕ್ಕೆ ಬರೋಬ್ಬರಿ 30 ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಈ ಪೈಕಿ, 12 ಕಾರು, 1 ಆಟೋ, 4 ಟೆಂಪೋಗಳ ಗ್ಲಾಸ್ ಪುಡಿ ಪುಡಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 25 ಲಕ್ಷ ಅಮೆರಿಕನ್ ಡಾಲರ್; ದೆಹಲಿಯತ್ತ ಪೊಲೀಸರು
ಈ ಘಟನಾ ಸ್ಥಳಕ್ಕೆ ರಾಜರಾಜೇಶ್ವರಿನಗರದ ಶಾಸಕ ಮುನಿರತ್ನ ಅವರು ಭೇಟಿ ನೀಡಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.