ಗದಗ | ಶೈಕ್ಷಣಿಕ ಧನಸಹಾಯ ಬಿಡುಗಡೆ ಮಾಡಿ; ಕಾರ್ಮಿಕರ ಮಕ್ಕಳಿಂದ ಪತ್ರ ಚಳವಳಿ

Date:

Advertisements

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕಾರ್ಮಿಕ ಸಚಿವರಿಗೆ ಕಾರ್ಮಿಕರ ಮಕ್ಕಳು ಪತ್ರ ಬರೆದು ಪತ್ರ ಚಳಿವಳಿ ನಡೆಸಿದ್ದಾರೆ. ಗಜೇಂದ್ರಗಡ ಮತ್ತು ನೆಲ್ಲೂರು ಗ್ರಾಮದ ಮಕ್ಕಳು ಸಚಿವರಿಗೆ ಪತ್ರ ಬರೆದು ಪೋಸ್ಟ್‌ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಕಾರ್ಮಿಕ‌ ಸಂಘಟನೆಯ ಮುಖಂಡ ಮೆಹಬೂಬ್ ಹವಾಲ್ದಾರ್, ಕಟ್ಟಡ ಕಾರ್ಮಿಕ ಮಕ್ಕಳ 2 ವರ್ಷಗಳಂದ ಬರಬೇಕಾದ ಶೈಕ್ಷಣಿಕ ಧನ ಸಹಾಯವನ್ನು ಸರ್ಕಾರ ತಡೆಹಿಡಿದಿದೆ. ಶೈಕ್ಷಣಿಕ ಧನ ಸಹಾಯವನ್ನು ಕಡಿತಗೊಳಿಸಿದ ಕಾರ್ಮಿಕ ಇಲಾಖೆ ಮತ್ತು ಸಚಿವರು ವಿರುದ್ಧ ಪತ್ರ ಚಳುವಳಿ ನಡೆಸುತ್ತಿದ್ದೇವೆ.

ಇಂದು ಪತ್ರ ಚಳುವಳಿಯ ಮೂಲಕ ಮೊದಲಿನಂತೆ ಶೈಕ್ಷಣಿಕ ಧನ ಸಹಾಯ ಬಿಡುಗಡೆ ಮಾಡಲು ಮತ್ತು ಕಡಿತಮಾಡಿದ ಧನ ಸಹಾಯವನ್ನು ವಿರೋಧಿಸಿ ಪತ್ರ ಚಳುವಳಿಯ ಮೂಲಕ ಮುಖ್ಯಮಂತ್ರಗಳಿಗೆ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ, ಕಾರ್ಮಿಕ ಆಯುಕ್ತರಿಗೆ, ಕಾರ್ಮಿಕ ಸಚಿವರಿಗೆ ಪತ್ರ ಹಾಕುವ ಮೂಲಕ ಧನ ಸಹಾಯ ಬಿಡುಗಡೆ ಮಾಡಲು ಒತ್ತಾಯಿಸುತ್ತಿದ್ದೇವೆ ಎಂದರು.

Advertisements

ಈ ಸಂದರ್ಭದಲ್ಲಿ ರೇವಣಪ್ಪ ರಾಠೋಡ, ಅಂದಪ್ಪ ರಾಠೋಡ, ಬಸಮ್ಮ ಕಿತ್ತೂರು, ಕಲ್ಲಪ್ಪ ಓಲೆಕಾರ, ನಿಂಗಪ್ಪ ಮಾಸ್ತಗಟ್ಟಿ ಮತ್ತು ವಿಧ್ಯಾರ್ಥಿಗಳು ಚಳವಳಿಯಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X