‘ಸ್ವಚ್ಛ ದೀಪಾವಳಿ-ಶುಭ ದೀಪಾವಳಿ’ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಬಿಬಿಎಂಪಿ ಅಭಿಯಾನ

Date:

Advertisements

ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಬೆಂಗಳೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲೀನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜತೆಗೆ ಪ್ರಾಣಿ-ಪಕ್ಷಿಗಳ ಜೀವಕ್ಕೂ ಅಪಾಯವಿದೆ. ಹಾಗಾಗಿ, ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗೂ ಮಾಲಿನ್ಯ ರಹಿತವಾಗಿ ಆಚರಿಸೋಣ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.

ಪಟಾಕಿ ಹಬ್ಬ ಹೀಗೆ ಆಚರಿಸಿ

  • ಸುಪ್ರೀಂ ಕೋರ್ಟ್‌ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಟಳಿಯ ನಿರ್ದೇಶನದಂತೆ, ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಬೇಕು.
  • ಪಟಾಕಿಗಳನ್ನು ಕೊಳ್ಳುವ ಸಮಯದಲ್ಲಿ ಪಟಾಕಿಗಳ ಪ್ಯಾಕೆಟ್‌ಗಳ ಮೇಲೆ ಹಸಿರು ಚಿನ್ನೆಯನ್ನು ಖಚಿತಪಡಿಕೊಳ್ಳಿ ಹಾಗೂ ಕ್ಯೂಆರ್ ಕೋಡ್ ಮೂಲಕ ಪಟಾಕಿಯ ಬಗ್ಗೆ ತಿಳಿದುಕೊಳ್ಳಿ.
  • ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರವೇ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ.
  • ಪಟಾಕಿಯ ಬಳಕೆಯ ಸಮಯದಲ್ಲಿ ಪ್ರಾಣಿಗಳು, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸುವುದು.

ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ, ಸ್ವಚ್ಛ ಭಾರತ್ ಯೋಜನೆ 2.0 ಅಡಿಯಲ್ಲಿ ‘ಸ್ವಚ್ಛ ದೀಪಾವಳಿ-ಶುಭ ದೀಪಾವಳಿ’ ಎಂಬ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ‘My Gov Portal’ ನಲ್ಲಿ ಅಥವಾ ವೆಬ್ ಲಿಂಕ್(https://pledge.mygov.in/swachh-diwali-shubh-diwali/) ಅಥವಾ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಮ್ಮ ದಾಖಲೆಗಳನ್ನು ನೊಂದಾಯಿಸಲು ಕೋರಿದೆ.

Advertisements

‘ಸ್ವಚ್ಛ ದೀಪಾವಳಿ-ಶುಭ ದೀಪಾವಳಿ’ ಅಭಿಯಾನಕ್ಕೆ ಕೈ ಜೋಡಿಸಲು ಹೆಮ್ಮೆಪಡುತ್ತೇನೆ. ಪರಿಸರ ಸ್ನೇಹಿ ಸ್ಥಳಿಯ ಉತ್ಪನ್ನಗಳನ್ನು ಬಳಸಲು ನಾನು ಬದ್ಧನಾಗಿದ್ದೇನೆ, ಏಕ ಬಳಕೆಯ ಪ್ಲಾಸ್ಟಿಕ್ ಬೇಡ ಎಂದು ಹೇಳುತ್ತೇನೆ ಮತ್ತು ಹಸಿರು ದೀಪಾವಳಿಯನ್ನು ಆಚರಿಸುತ್ತೇನೆ’. ಎಂದು ಪ್ರಮಾಣವನ್ನು ಮಾಡಿ “ಸ್ವಚ್ಚ ದೀಪಾವಳಿ-ಶುಭ ದೀಪಾವಳಿ” ಅಭಿಯಾನದಲ್ಲಿ ಪಾಲ್ಗೋಳ್ಳಲು ಬಿಬಿಎಂಪಿ ಸಾರ್ವಜನಿಕರಲ್ಲಿ ಕೋರಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುದನಾಳದಲ್ಲಿಟ್ಟು ₹3 ಕೋಟಿ ಮೌಲ್ಯದ 5 ಕೆ.ಜಿ ಚಿನ್ನ ಸಾಗಣೆಗೆ ಯತ್ನ; ಜಪ್ತಿ

ಹಸಿರು ಪಟಾಕಿ ಬಳಸಲು ಜಾಗೃತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಸಿರು ಪಟಾಕಿಯನ್ನು ಮಾತ್ರ ಬಳಸು ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸುವ ಸಲುವಾಗಿ ಘನತ್ಯಾಜ್ಯ ವಿಭಾಗದ ಆಟೋ ಟಿಪ್ಪರ್ ಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಿಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X