ಫಿಟ್ನೆಸ್ ಸೆಂಟರ್‌ನಲ್ಲಿ ವರ್ಕೌಟ್ ಮುಗಿಸಿ ಯುವತಿಯೊಬ್ಬರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಜಿಮ್ ತರಬೇತುದಾರನನ್ನು ಬೆಂಗಳೂರಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ.
ಜಿಮ್ ತರಬೇತುದಾರ ಸಿಬಿಯಾಚನ್ ಬಂಧಿತ ಆರೋಪಿ. ಈತ ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್ಐ ಲೇಔಟ್‌ನಲ್ಲಿ ಫಿಟ್ನೆಸ್ ಸೆಂಟರ್‌ನಲ್ಲಿ ಜಿಮ್ ತರಬೇತುದಾರನಾಗಿದ್ದಾನೆ.
ಯುವತಿ ಫಿಟ್ನೆಸ್ ಸೆಂಟರ್‌ನಲ್ಲಿ ಬ್ಯಾಡ್ಮಿಂಟನ್ ಮತ್ತು ಜಿಮ್ ವರ್ಕೌಟ್ ತರಬೇತಿ ಮುಗಿಸಿ ಸ್ನಾನ ಮಾಡಲು ಬಾತ್ ರೂಂಗೆ ತೆರಳಿದ್ದರು. ಈ ವೇಳೆ, ಜಿಮ್ ತರಬೇತುದಾರ ಸಿಬಿಯಾಚನ್ ಕಿಟಕಿಯ ಮೂಲಕ ಮೊಬೈಲ್ನಲ್ಲಿ ಚಿತ್ರೀಕರಿಸುವುದನ್ನು ಯುವತಿ ಗಮನಿಸಿದ್ದಾಳೆ. ಬಳಿಕ ಹೊರಗೆ ಬಂದು ನೋಡಿದಾಗ ಯಾರು ಇರಲಿಲ್ಲ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಿಟ್ ಆ್ಯಂಡ್ ರನ್‌ಗೆ ಪಾದಚಾರಿ ಸಾವು
ತಕ್ಷಣ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ ಸಿಬಿಯಾಚನ್ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.