- ಎ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಮುನಿಯಪ್ಪ ಪ್ರಯತ್ನ
- ಪರಿಶಿಷ್ಟ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ವರದಿ
ಎ ಜೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸುವಂತೆ ಶಾಸಕರಿಗೆ ಒತ್ತಡ ಹೇರಲು ಕರೆ ನೀಡಿರುವ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಅಧ್ಯಕ್ಷ ರವಿ ಮಾಕಳಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿ, “ಕೆ ಎಚ್ ಮುನಿಯಪ್ಪ ಅವರ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸಿ ಅವರನ್ನು ಸಚಿವ ಸಂಪುಟದಿಂದ ಮುಖ್ಯಮಂತ್ರಿಗಳು ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.
“ಹಲವು ದಿನಗಳಿಂದ ಪರಿಶಿಷ್ಟ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಅವೈಜ್ಞಾನಿಕ, ಅಸಂವಿಧಾನಿಕ ಎ ಜೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸುವಂತೆ ಶಾಸಕರಿಗೆ ಒತ್ತಡ ಹೇರಲು ಕರೆ ನೀಡಿದ್ದಾರೆ. ಈ ಮೂಲಕ ರಾಜಧರ್ಮವನ್ನು ಧಿಕ್ಕರಿಸಿ ಸ್ವಜನಪಕ್ಷಪಾತವನ್ನು ಸಚಿವರು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಜಾತಿ ಗಣತಿ | ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಮನೂರು
ಸುದ್ದಿಗೋಷ್ಠಿಯಲ್ಲಿ ಒಕ್ಕೂಟ ಕಾರ್ಯಾಧ್ಯಕ್ಷ ರಾಘವೇಂದ್ರನಾಯ್ಕ ಪ್ರಧಾನ ಕಾರ್ಯದರ್ಶಿ ಗಂಗಾನಾಯ್ಕ ಗೊಂದಿ, ರಾಜ್ಯ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ರಾಜ್ಯ ಸಹ ಕಾರ್ಯದರ್ಶಿ ರವಿಪೂಜಾರ್, ರಾಜ್ಯ ಕಾರ್ಯದರ್ಶಿ, ರಾಜ್ಯ ಖಜಾಂಚಿ ಅರುಣ್ ಕುಮಾರ್, ಶ್ರೀಧರ್,ರಾಜ್ಯ ಮುಖಂಡರಾದ ರುದ್ರುಪುನೀತ್, ಗೀರಿಶ್ ಮೂಡ್ ನಾನ್ಯಾನಾಯಕ್ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಮತ್ತಿತ್ತರು ಇದ್ದರು.