ರಾಜ್ಯ ರಾಜಧಾನಿ ಬೆಂಗಳೂರಿನ ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಜನರ ಓಡಾಟಕ್ಕೆ ಅನುಕೂಲವಾಗಲೂ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಜತೆಗೆ ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ನ.10 ರಂದು ಉದ್ಘಾಟನೆ ಮಾಡಿ ಮಾತನಾಡಿದ ಅವರು, “ನಾನು ಬರೀ ಇಲ್ಲಿ ತಾಂತ್ರಿಕ ತರಬೇತಿ ಕಟ್ಟಡವನ್ನು ಉದ್ಘಾಟನೆ ಮಾಡಲು ಬಂದಿಲ್ಲ. ಜತೆಗೆ ಎರಡು ಮಹತ್ವದ ಘೋಷಣೆ ಮಾಡಲಿದ್ದೇನೆ. ಮುಂದಿನ ಬಿಡದಿಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಪ್ರಮುಖವಾಗಿ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗಿದೆ” ಎಂದು ಹೇಳಿದರು.
“ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಕೆಲಸ ಮಾಡುತ್ತಿದ್ದಾರೆ. ಇವರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲು ಮೆಟ್ರೋ ಯೋಜನೆ ಇಲ್ಲಿಯ ತನಕ ವಿಸ್ತರಿಸುವಂತೆ ಶಾಸಕರು, ಸಂಸದರು ಮನವಿ ಸಲ್ಲಿಸಿದ್ದರು. ಮಾಗಡಿ ಶಾಸಕ ಬಾಲಕೃಷ್ಣ ಹಾಗೂ ಸಂಸದ ಡಿಕೆ ಸುರೇಶ್ ಅವರು ಮೆಟ್ರೋಗಾಗಿ ಬೆನ್ನು ಬಿದ್ದಿದ್ದಾರೆ. ಬಿಎಂಆರ್‌ಸಿಎಲ್‌ಗೆ ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದ್ದೇನೆ. ಬೆಂಗಳೂರಿನ ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಿಸಲಾಗುವುದು” ಎಂದು ತಿಳಿಸಿದರು.
ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಇಂದು ಉದ್ಘಾಟಿಸಿ, ಮಾತನಾಡಿದೆ.
ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ಆಟೋಮೊಬೈಲ್ ಕ್ಷೇತ್ರದಲ್ಲಿ ಉತ್ತಮ ಹೆಸರುಗಳಿಸಿದ್ದು, ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆ ತಂದಿದೆ. ಕರ್ನಾಟಕ ರಾಜ್ಯದೊಂದಿಗೆ ವಿವಿಧ ಹೂಡಿಕೆ ಮಾಡುವ ಮೂಲಕ… pic.twitter.com/kEGNFWmAgr
— DK Shivakumar (@DKShivakumar) November 10, 2023
“ಬಿಡದಿ ಯೋಜನಾ ಪ್ರಾಧಿಕಾರವನ್ನು ತೆಗೆದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮಾಡುತ್ತೇವೆ. ಬಿಡದಿಯಲ್ಲಿ ಸುಮಾರು 10,000 ಎಕರೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು ಯಾವುದೇ ಉದ್ದೇಶಕ್ಕೆ ಬಳಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಸಿಗುವ ಸೌಲಭ್ಯ ಈ ಭಾಗದಲ್ಲೂ ಸಿಗಬೇಕು. ಈ ಯೋಜನೆಗಳ ಮೂಲಕ ಈ ಭಾಗ ಅಭಿವೃದ್ಧಿ ಆಗಬೇಕು. ಈ ಭಾಗದ ಜನರ ಆಸ್ತಿ ಮೌಲ್ಯ ಹೆಚ್ಚಾಗಬೇಕು. ಈ ಭಾಗದ ಆಸ್ಪತ್ರೆ, ವಿದ್ಯಾಸಂಸ್ಥೆಗಳು, ಕಾರ್ಮಿಕರು, ಅವರ ಮಕ್ಕಳು ಹೀಗೆ ಎಲ್ಲರಿಗೂ ಹೊಸ ಶಕ್ತಿ ತುಂಬಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿಮ್ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ
“ಮೆಟ್ರೋ ಸದ್ಯದಲ್ಲೇ ಬಿಡದಿಗೆ ಬರಲು ಸರ್ವೆ ಕಾರ್ಯ ಶುರುವಾಗಲಿದೆ. ಬೆಂಗಳೂರಿನ ಶಕ್ತಿಯನ್ನು ಬಿಡದಿಗೆ ನೀಡಲಾಗುವುದು” ಎಂದು ತಿಳಿಸಿದರು.