ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ವಿಶ್ರಾಂತ ಕುಲಪತಿ ಹನುಮಣ್ಣ ನಾಯಕ ನಿಧನ

Date:

Advertisements

ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ವಿಶ್ರಾಂತ ಕುಲಪತಿ, ಹಿಂದೂಸ್ಥಾನಿ ಸಂಗೀತಗಾರ ಹಾಗೂ ಲೇಖಕ ಹನುಮಣ್ಣ ನಾಯಕ (69) ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪ್ರೊ.ಹನುಮಣ್ಣ ನಾಯಕ ದೊರೆ ಅವರು ಕೆಲ ಕಾಲದಿಂದ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ನಿಧನರಾದರು.

ಅವರಿಗೆ ಇಬ್ಬರು ಪತ್ನಿಯರು, ನಾಲ್ವರು ಪುತ್ರರು, ಪುತ್ರಿ ಇದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಒಂದೇ ಬಾಲ್‌ಗೆ ಎರಡು ವಿಕೆಟ್: ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ‘ಟೈಮ್ಡ್ ಔಟ್’ಗೆ ಮ್ಯಾಥ್ಯೂಸ್ ಔಟ್

ಹನುಮಣ್ಣ ಅವರು ಕೆಲ ಕಾಲ ಕಲಬುರಗಿಯ ಡಾ.ಶರಣಬಸವಪ್ಪ ಅಪ್ಪ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥರಾಗಿದ್ದರು.

ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಹಂಪಿ ಕನ್ನಡ ವಿವಿ ಕುಲಪತಿಯಾಗಿದ್ದ ಅವಧಿಯಲ್ಲಿ ಹನುಮಣ್ಣ  ಅವರನ್ನು ಪ್ರಾಧ್ಯಾಪಕರನ್ನಾಗಿ ನೇಮಕ ಮಾಡಿಕೊಂಡಿದ್ದರು. ನಂತರ ಹನುಮಣ್ಣ
ಅವರು ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಕುಲಪತಿಯಾಗಿದ್ದರು. ಅವಧಿ ಮುಗಿದ ಬಳಿಕ ಹಂಪಿ ವಿವಿಗೆ ವಾಪಸಾಗಿ ಅಲ್ಲಿಯೇ ಕೆಲಸದಿಂದ ನಿವೃತ್ತರಾಗಿದ್ದರು.

ಶುಕ್ರವಾರ ಸಂಜೆ ಸ್ವಗ್ರಾಮ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ತೆಗ್ಗಿಹಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X