ತುಮಕೂರು | ಅಂಬೇಡ್ಕರ್ ಅವರ ಜ್ಞಾನ ಯುವ ಪೀಳಿಗೆಗೆ ಆದರ್ಶವಾಗಬೇಕು: ವಿವಿ ಕುಲಸಚಿವ

Date:

Advertisements

ಯುವ ಪೀಳಿಗೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ ಜ್ಞಾನ ಆದರ್ಶವಾಗಬೇಕು. ಅವರ ಸಮಗ್ರ ಕೃತಿಗಳನ್ನು ಓದುವುದರ ಮೂಲಕ ಜ್ಞಾನವನ್ನು, ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಸಚಿವರ ನಹೀದಾ ಜಮ್ ಜಮ್ ತಿಳಿಸಿದರು.

ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು ವಿಶ್ವವಿದ್ಯಾನಿಲಯ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಆಯೋಜಿಸಿದ್ದ ‘ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಿರಂತರ ಅಧ್ಯಯನ, ಏಕಾಗ್ರತೆ, ಸ್ವಅರಿವು, ಶಿಸ್ತು, ದೃಢಸಂಕಲ್ಪ ಇವೆಲ್ಲವನ್ನು ಮೈಗೂಡಿಸಿಕೊಂಡ ಕಾರಣದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಜಗತ್ ಪ್ರಸಿದ್ಧಿಯನ್ನು ಪಡೆದು ಈ ದೇಶದ ಶೋಷಿತರ ಮತ್ತು ಮಹಿಳೆಯರ ಬೆಳಕಾಗಿ ಇಂದಿಗೂ ಸಾಧನೆಯ ಶಿಖರವಾಗಿದ್ದಾರೆ. ಇಂದಿನ ವಿದ್ಯಾರ್ಥಿಗಳು ಮೌಢ್ಯತೆಗಳಿಗೆ ಮಾರು ಹೋಗದೆ ವೈಚಾರಿಕ ಮನೋಭಾವದಿಂದ ದೇಶವನ್ನು ಕಟ್ಟಲು ಅನೇಕ ರೀತಿಯ ಬರಹ ಭಾಷಣಗಳನ್ನು ಕೊಡುಗೆಯಾಗಿ ನೀಡಿದ್ದಾರೆ” ಎಂದು ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯದ ಐಕ್ಯೂಎಸಿ ನಿರ್ದೇಶಕ ಪ್ರೊ. ಬಿ. ರಮೇಶ್ ಮಾತನಾಡಿದ, “ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳು ಇಂದಿಗೆ ಅತ್ಯಗತ್ಯವಾಗಿ ಬೇಕಾಗಿದೆ. ಇಂದಿನ ಸಮಾಜವು ಆಧುನಿಕತೆಯ ಮಾರ್ಗದಲ್ಲಿ ಸಾಗುತ್ತಿದ್ದರೂ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ, ಕೋಮುವಾದ, ಅಸಮಾನತೆ, ಬಂಡವಾಳ ಶಾಹಿ ವ್ಯವಸ್ಥೆ ಇವೆಲ್ಲವು ಸಂವಿಧಾನದ ಆಶಯಗಳನ್ನು ನಾಶ ಮಾಡುತ್ತಿವೆ. ಡಾ. ಬಿ.ಆರ್.ಅಂಬೇಡ್ಕರ್ ರವರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡಾಗ ಸಂವಿಧಾನದ ನೈಜ ಆಶಯಗಳು ಅರ್ಥವಾಗುತ್ತವೆ. ಸಮಾಜವು ಸುಧಾರಣೆಯಾಗುತ್ತದೆ” ಎಂದು ತಿಳಿಸಿದರು.

Advertisements

ಡಾ. ಬಿ.ಆರ್.ಅಂಬೇಡ್ಕರ್ ರವರ ವಿಚಾರ ಧಾರೆಗಳು ಜೀವಪರ ಮಾನವೀಯತೆಯ ನೆಲೆಗಟ್ಟಿನಿಂದ ಕೂಡಿದ್ದು, ಸಮಾನತೆ, ಸಾಮಾಜಿಕ ನ್ಯಾಯ, ಭ್ರಾತೃತ್ವ, ಜಾತ್ಯಾತೀತತೆ ಮುಂತಾದ ಅಂಶಗಳು ಈ ದೇಶಕ್ಕೆ ಅನಿವಾರ್ಯವಾಗಿದ್ದು ಇವುಗಳನ್ನು ಕಾಯ್ದುಕೊಳ್ಳಲು ಇಂದಿನ ಯುವಕರು ಸದಾ ಸನ್ನದ್ಧರಾಗಬೇಕು ಎಂದು ತಿಳಿಸಿದರು.

ಪ್ರಬಂಧ ಸ್ವರ್ಧೆಯಲ್ಲಿ ಪ್ರಥಮ ಸ್ಥಾನ ಬಿ.ಎಂ ರಾಧಾ, ದ್ವಿತೀಯ ಸ್ಥಾನ ತೇಜಸ್ವಿನಿ ಎಸ್., ಅಭಿಷೇಕ್ ಎ. ಬೆನ್ನೂರ್ ಹಾಗೂ ಸಮಾಧಾನಕರ ಬಹುಮಾನಗಳಾಗಿ ತಿಪ್ಪೇಸ್ವಾಮಿ, ಹಾಗೂ ಪೂಜಾ, ಅವರುಗಳು ಆಯ್ಕೆಯಾಗಿದ್ದು, ಈ ಸಂದರ್ಭದಲ್ಲಿ ಅವರಿಗೆ ಪುಸ್ತಕಗಳನ್ನು ಬಹುಮಾನದ ರೂಪದಲ್ಲಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾಲಯದ ವಿಶೇಷ ಘಟಕ ಯೋಜನೆ ಸಂಚಾಲಕ ಡಾ.ಕೆ. ಮಹಾಲಿಂಗ, ಸಂಯೋಜಕ ಡಾ. ಚಿಕ್ಕಣ್ಣ, ಡಾ: ಕೆ. ಎನ್. ಲಕ್ಷ್ಮಿರಂಗಯ್ಯ, ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆಯ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X