ಬೆಂಗಳೂರು ನಗರ ಪಶ್ಚಿಮ ವಿಭಾಗದ ಪೊಲೀಸರು ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿ 150ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ ಕ್ಲಬ್ನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜು ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವೇಶ್ವರ ನಗರದಲ್ಲಿರುವ ಅಶೋಕ್ ಅಡಿಗ ಎಂಬುವರಿಗೆ ಸೇರಿದ ಅಡಿಗ ರಮ್ಮಿ ಕ್ಲಬ್ನಲ್ಲಿ 150ಕ್ಕೂ ಹೆಚ್ಚು ಮಂದಿ ಇಸ್ಪೀಟ್ ದಂಧೆಯಲ್ಲಿ ತೊಡಗಿದ್ದರು. ಪೊಲೀಸರು ದಂಧೆಯಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ರಿಯಾಯಿತಿ ದರದಲ್ಲಿ ನ.16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್ ಪರಿಚಯ
ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ದಾಳಿ ಸಮಯದಲ್ಲಿ ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ ಕ್ಲಬ್ನಲ್ಲಿ ದೊರೆತ ಲಕ್ಷಾಂತರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.