ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಭೀಕರ ಅಪಘಾತ; ಐವರ ಸಾವು

Date:

Advertisements
  • ಐದು ಮಂದಿ ಸಾವು, 60 ಪ್ರಯಾಣಿಕರಿಗೆ ಗಾಯ
  • ಸರ್ಕಾರಿ ಬಸ್, ಓಮ್ನಿ ಬಸ್ ಮುಖಾಮುಖಿ ಡಿಕ್ಕಿ

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ತಮಿಳುನಾಡು ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಮತ್ತು ಒಮ್ನಿ ನಡುವೆ ನಸುಕಿನಲ್ಲಿ ಅಪಘಾತ ಸಂಭವಿಸಿದೆ. ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸಾವನ್ನಪ್ಪಿರುವವರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಹಾಗೂ ಓಮ್ನಿಬಸ್ ಚಾಲಕ ಎನ್ ಸೈಯದ್ ಎಂದು ಗುರುತಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿಜೋರಾಂ ಪ್ರಚಾರಕ್ಕೆ ಮೋದಿ ಚಕ್ಕರ್; ಜನಾಕ್ರೋಶದ ಭಯವೇ?

“ಬೆಳಗ್ಗೆ ಸುಮಾರು 4 ಗಂಟೆಯ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

Download Eedina App Android / iOS

X