ಪೂರ್ವ ಜೆರುಸಲೇಂ ಸೇರಿದಂತೆ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಇಸ್ರೇಲ್ ದಾಳಿ ಖಂಡಿಸುವ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.
ಆಕ್ರಮಿತ ಸಿರಿಯನ್ ಗೋಲನ್ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ ಏಳು ದೇಶಗಳಲ್ಲಿ ಅಮೆರಿಕ ಮತ್ತು ಕೆನಡಾ ಸೇರಿವೆ. ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು.
ವಿಶ್ವಸಂಸ್ಥೆಯಲ್ಲಿ ನಡೆದ ಮತದಾನದಲ್ಲಿ ಭಾರತ ಸೇರಿ 145 ದೇಶಗಳು ವಿಶ್ವಸಂಸ್ಥೆ ನಿರ್ಣಯಕ್ಕೆ ಬೆಂಬಲ ಸೂಚಿಸಿವೆ.
ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ “ತಕ್ಷಣದ, ಸ್ಥಿರವಾದ ಮತ್ತು ನಿರಂತರ ಮಾನವೀಯ ಒಪ್ಪಂದ” ಕ್ಕೆ ಕರೆ ನೀಡುವ ವಿಶ್ವಸಂಸ್ಥೆ ನಿರ್ಣಯದ ಮೇಲೆ ಭಾರತವು ಮತದಾನದಿಂದ ದೂರ ಉಳಿದ ಕೆಲವು ವಾರಗಳ ನಂತರ ಮತ್ತೊಂದು ನಿರ್ಣಯಕ್ಕೆ ಭಾರತ ಮತ ಚಲಾಯಿಸಿದೆ.
ಈ ಸುದ್ದಿ ಓದಿದ್ದೀರಾ? ಅ.7ರಂದು ಹಮಾಸ್ ದಾಳಿಯಿಂದ ಸತ್ತವರು 1400 ಅಲ್ಲ, 1200; ಇಸ್ರೇಲ್ ಪ್ರಕಟಣೆ
ಇಸ್ರೇಲ್ ಮೇಲೆ ಅಕ್ಟೋಬರ್ 7 ರ ದಾಳಿಯಿಂದ ಪ್ರಚೋದಿಸಲ್ಪಟ್ಟ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಗಾಜಾದಲ್ಲಿ 11,000 ಕ್ಕೂ ಹೆಚ್ಚು ಅಮಾಯಕರನ್ನು ಬಲಿ ತೆಗೆದುಕೊಂಡಿದೆ. ಹಮಾಸ್ ದಾಳಿಯಲ್ಲಿ ಸುಮಾರು 1,200 ಇಸ್ರೇಲಿಗಳು ಮೃತಪಟ್ಟಿದ್ದಾರೆ ಮತ್ತು 200 ಕ್ಕೂ ಹೆಚ್ಚು ಒತ್ತೆಯಾಳಾಗಿದ್ದಾರೆ.
“ವಿಶ್ವಸಂಸ್ಥೆಯ ಸಾಮಾನ್ಯಸಭೆಯ ನಿರ್ಣಯವು ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯ ಯಾವುದೇ ಸ್ಪಷ್ಟ ಖಂಡನೆಯನ್ನು ಒಳಗೊಂಡಿಲ್ಲ. ಮುಖ್ಯ ನಿರ್ಣಯದ ಮೇಲೆ ಮತ ಚಲಾಯಿಸುವ ಮೊದಲು ಈ ಅಂಶವನ್ನು ಸೇರಿಸಲು ತಿದ್ದುಪಡಿಯನ್ನು ತರಲಾಯಿತು” ಎಂದು ಮೂಲವೊಂದು ಸುದ್ದಿ ಸಂಸ್ಥೆಗೆ ತಿಳಿಸಿದೆ.
ಭಾರತವು ತಿದ್ದುಪಡಿಯ ಪರವಾಗಿ ಮತ ಚಲಾಯಿಸಿ ತನ್ನ ಪರವಾಗಿರುವ 88 ಮತಗಳನ್ನು ಗಳಿಸಿತು.