ಛತ್ತೀಸ್‌ಗಢ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.
ನವೆಂಬರ್ 17 ರಂದು ನಡೆಯಲಿರುವ ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಗೆ ಮುಂಚಿತವಾಗಿ ಪ್ರಕಟವಾದ ಈ ಘೋಷಣೆಯು ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಪಾಯಿಗಳನ್ನು ನೀಡುವ ಬಿಜೆಪಿಯ ಭರವಸೆಗೆ ಪ್ರತಿಯಾಗಿ ಪ್ರಕಟಿಸಲಾಗಿದೆ.
“ದೀಪಾವಳಿಯ ಶುಭ ಸಂದರ್ಭದಲ್ಲಿ, ಛತ್ತೀಸ್‌ಗಢದ ಮಹಿಳೆಯದ ಸಬಲೀಕರಣಕ್ಕಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಬಘೇಲ್ ರಾಯ್‌ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ದಾಳಿ ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಬೆಂಬಲ
ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ, ‘ಛತ್ತೀಸ್‌ಗಢ ಗೃಹ ಲಕ್ಷ್ಮಿ ಯೋಜನೆ’ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ನೀಡಲಾಗುವುದು’ ಎಂದು ಅವರು ಹೇಳಿದರು.
ರಾಜ್ಯದ ಒಟ್ಟು 90 ವಿಧಾನಸಭಾ ಸ್ಥಾನಗಳ ಪೈಕಿ 20 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನವೆಂಬರ್ 7 ರಂದು ನಡೆದಿದ್ದು, ಉಳಿದ 70 ಸ್ಥಾನಗಳಿಗೆ ನವೆಂಬರ್ 17 ರಂದು ಮತದಾನ ನಡೆಯಲಿದೆ.